ಗುಲ್ಬರ್ಗಾ

ಕಾಲುವೆಗೆ ನೀರು ಹರಿಸಲು ಮನವಿ

ಚಿಂಚೋಳಿ: ತಾಲೂಕಿನಲ್ಲಿ ಮುಂಗಾರು ಮಳೆ ಅಭಾವದಿಂದ ಬರದ ಛಾಯೆ ಆವರಿಸಿದ್ದು, ದನಕರುಗಳಿಗೆ ಮೇವಿನ ಮತ್ತು ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ.
ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಕಾಲುವೆಗೆ ಮತ್ತು ಗೇಟುಗಳ ಮೂಲಕ ನೀರು ಹರಿಸಬೇಕು ಎಂದು ಅಚ್ಚುಕಟ್ಟು ಪ್ರದೇಶದ ರೈತರು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ತಾಲೂಕಿನಲ್ಲಿ ಜೂನ್ ತಿಂಗಳಲ್ಲಿ ಮಳೆ ಪ್ರಮಾಣ ಅತಿ ಕಡಿಮೆಯಾಗಿದ್ದರಿಂದ ಹಳ್ಳಕೊಳ್ಳದಲ್ಲಿ ನೀರಿಲ್ಲದೆ ದನಕರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೆ ಈಗಾಗಲೇ ಕೆಲವು ಕಡೆಗಳಲ್ಲಿ ರೈತರು ಮೇವಿನ ಕೊರತೆಯಿಂದ ದನಕರುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕೆಳದಂಡೆ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ಕೆಲವು ಗ್ರಾಮಗಳಲ್ಲಿ ರೈತರು ಮುಂಗಾರು ಬಿತ್ತನೆ ಮಾಡಿದ್ದು, ನೀರಿನ ಅವಶ್ಯಕತೆ ಇದೆ. ಹೀಗಾಗಿ ನೀರು ಹರಿಸುವಂತೆ ಒತ್ತಾಯಿಸಲಾಗಿದೆ.
ಈ ಬಗ್ಗೆ ಕೆಳದಂಡೆ ಮುಲ್ಲಾಮಾರಿ ಜಲಾಶಯದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಾಹೀದ್ ಅಲಿ ಅವರನ್ನು ಮಾತನಾಡಿಸಿದಾಗ ಜಲಾಶಯದ ಒಟ್ಟು 491 ಮೀ. ಗರಿಷ್ಠ ನೀರಿನ ಮಟ್ಟದಲ್ಲಿ ಸದ್ಯ 488.92 ಮೀ. ಕನಿಷ್ಠ ನೀರಿನ ಮಟ್ಟವಿದೆ. ಜಲಾಶಯದಲ್ಲಿ 1.1715 ಟಿಎಂಸಿ ನೀರಿನ ಸಂಗ್ರಹವಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಲುವೆಗೆ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಣಯಿಸಲಾಗಿತ್ತು. ಕೆಲವರು ನೀರು ಬಿಡದಂತೆ ಕಚೇರಿಗೆ ಬಂದು ಗಲಾಟೆ ಮಾಡಿದ್ದರಿಂದ ನೀರು ಬಿಡಲಾಗಿಲ್ಲ. ಮಳೆಯ ಅಭಾವದಿಂದಾಗಿ ರೈತರ ಬೆಳೆಗಳು ಹಾಳಾಗುತ್ತಿವೆ. ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಗುರುವಾರದಿಂದ ಗೇಟುಗಳ, ಎಡದಂಡೆ ಮುಖ್ಯಕಾಲುವೆ ನೀರು ಹರಿದು ಬಿಡಲಾಗುವುದೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!