ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜಿಲ್ಲಾ ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ

Mainashree
Updated On : 3 Jul 2014, 9:50 am

ಯಾದಗಿರಿ: ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂದಿ ಕಾರ್ಯವೈಖರಿ ಮೇಲೆ ನೀಗಾ ಇಡಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾ ಆಸ್ಪತ್ರೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೂಚಿಸಿದರು.
ಜಿಲ್ಲಾ ಆಸ್ಪತೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿ, ಸ್ವಚ್ಛತಾ ಸಿಬ್ಬಂದಿ ಮಾಹಿತಿ ತರಿಸಿಕೊಂಡು, ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಶುಚಿತ್ವ ಕಾಪಾಡುವಂತೆ ಸಿಬ್ಬಂದಿಗೆ ಅದೇಶಿಸಿದರು. ಆಸ್ಪತ್ರೆಯಲ್ಲಿ ಸಂಗ್ರಹವಾದ ಕಸ ತೆಗೆಯಲು ಜಿಲ್ಲಾಧಿಕಾರಿ ಸೂಚಿಸಿದರೂ, ಸಹ ಕಸ ವಿಲೇವಾರಿ ಮಾಡಿದ ಕಾರಣ, ನಗರಸಭೆ ಪೌರಾಯುಕ್ತ ಮೈನೋದ್ದಿನ್ ಅವರಿಗೆ ತರಾಟೆ ತೆಗೆದುಕೊಂಡು ತಕ್ಷಣವೇ ಕಸ ತೆಗೆದು ಹಾಕಬೇಕು ಎಂದು ತಾಕೀತು ಮಾಡಿದರು.
ಆಸ್ಪತ್ರೆಯ ಛಾವಣೆ ಸೋರುತ್ತಿದ್ದು, ಕೂಡಲೇ ಲೋಕೋಪಯೋಗಿ ಅಧಿಕಾರಿಗಳನ್ನು ಕರೆಯಿಸಿ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಭಗವಂತ ಅನವಾರ ಅವರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ವೈದ್ಯರ ಕೊರತೆಯಿದ್ದು, ಶೀಘ್ರವೇ ವೈದ್ಯರ ನೇಮಕಾತಿ ಬಗ್ಗೆ ಮಾಡುವಂತೆ ಗಂಗೂಬಾಯಿ ಮಾನಕರ್ ಹೇಳಿದರು. ಡಾ. ಮಲ್ಲಿಕಾರ್ಜುನ ಮುಕ್ಕಾ ಮಾತನಾಡಿ, ಈಗಾಗಲೇ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕ್ರಮಕೈಗೊಂಡಿದ್ದು, ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement