ಗುಲ್ಬರ್ಗಾ

ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ

ಕನ್ನಡಪ್ರಭ ವಾರ್ತೆ  ಯಾದಗಿರಿ  ಜು.3
ಜಿಲ್ಲಾದ್ಯಂತ ಮುಂಗಾರು ಪ್ರಾರಂಭಗೊಂಡು ಒಂದು ತಿಂಗಳು ಗತಿಸಿದರೂ, ಮಳೆಯಾಗದ ಕಾರಣ ಸರ್ಕಾರ ಕೂಡಲೇ ಯಾದಗಿರಿಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಸಿಪಿಐ ಪಕ್ಷದಿಂದ ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
  ಜಿಲ್ಲೆಯಲ್ಲಿ ಮಳೆ ಬರುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಗ್ರಾಮೀಣ ಭಾಗದಲ್ಲಿನ ರೈತಾಪಿ ವರ್ಗ ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಮಳೆ ಭಾರದ ಹಿನ್ನೆಲೆಯಲ್ಲಿ ಆತಂಕದಿಂದ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ಕೂಡಲೇ ಯಾದಗಿರಿಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು.
  ಬರ ಕಾಮಗಾರಿಗಳಿಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವ ರೈತರ ಸಂಕಷ್ಟಕ್ಕೆ ನೆರವಾಗಬೇಕು. ಜಿಲ್ಲೆಯ ವಿವಿಧ ಗ್ರಾ.ಪಂ.ಗಳಲ್ಲಿ ತಲೆ ದೂರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
  ಜಿಲ್ಲೆಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ಖಾತ್ರಿ ಯೋಜನೆಯಡಿ ನಡೆದ ಕಾಮಗಾರಿಗಳ ಹಣ ಬಿಡುಗಡೆಯಾಗದೆ, ಕೂಲಿಕಾರರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಜಿ.ಪಂ. ಅಧಿಕಾರಿಗಳು ಬೇಜಾವ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
  ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದರೂ, ಅಧಿಕಾರಿಗಳ ಮಾತ್ರ ಕಂಡು ಕಾಣದಂತೆ ಸುಮ್ಮನಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ನಡೆಸಿದ ಅಧಿಕಾರಿಗಳು, ಮತ್ತು ಪಿಡಿಒಗಳಿಗೆ ತಕ್ಷಣವೇ ಕೆಲಸದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
  ಈ ಸಂದರ್ಭದಲ್ಲಿ ಸಂಘಟನೆಯ ಅಶೋಕ ಕಲಾಲ್, ಹಣಮಂತ ಗೋನಾಳ, ದಾವುಲಸಾಬ ನದಾ, ಮಹ್ಮದ ಹನೀ, ಸಿದ್ಧನಗೌಡ, ಮಲ್ಲೇಶಪ್ಪ ಬಸವರಾಜಯ್ಯ ಇನ್ನಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್