ಗುಲ್ಬರ್ಗಾ

ಕಂಪ್ಯೂಟರ್ ಆಪರೇಟರ್ ಬದಲಿಸಿ

ಗುರುಮಠಕಲ್: ಪಟ್ಟಣದ ವಿಶೇಷ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸರ್ಕಾರದ ಸೌಲಭ್ಯ ಕಲ್ಪಿಸಬೇಕಾದ ಇಲ್ಲಿನ ಕಂಪ್ಯೂಟರ್ ಆಪರೇಟರ್ ಬಸವರಾಜ ಸಂಜನೋಳ್ ಜನತೆಗೆ ಮೋಸ ಮಾಡುತ್ತಿದ್ದು ತಕ್ಷಣ ಅವರನ್ನು ವರ್ಗಾಯಿಸಬೇಕೆಂದು ಯುವ ಕಾಂಗ್ರೆಸ್ ಅಧ್ಯಕ್ಷ ಭೀಮಶಪ್ಪ ಮನ್ನೆ ಆಗ್ರಹಿಸಿದ್ದಾರೆ.
ಕಾರ್ಯಾಲಯಕ್ಕೆ ಬರುವ ಬಡ ಹಾಗೂ ಅನಕ್ಷರಸ್ಥರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಪತ್ರ ನೀಡುವ ಸಂದರ್ಭ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ನೀಡದವರಿಗೆ ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಶೇಷ ತಹಸೀಲ್ ಕಾರ್ಯಾಲಯದಲ್ಲಿ ಬಡವರು ಹಾಗೂ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವವರನ್ನು ತಕ್ಷಣ ವಜಾಗೊಳಿಸಬೇಕು. ತಹಸೀಲ್ದಾರರ ಮಾತಿಗೆ ಬೆಲೆ ಕೊಡದೆ ದರ್ಬಾರ್ ನಡೆಸುತ್ತಿರುವ ಬಸವರಾಜ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ.ಪಂ.ಸದಸ್ಯೆ ನಫಿಜಾ ಖಾತೂನ್ ಹಾಗೂ ಮಾಜಿ ಯುವ ಕಾಂಗ್ರೇಸ್ ಅಧ್ಯಕ್ಷ ಚಾಂದ ಪಾಷಾ ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!