ಗುಲ್ಬರ್ಗಾ

ವಿವಿಧ ಸಂಘಟನೆಗಳ ಪ್ರತಿಭಟನೆ

ಗುಲ್ಬರ್ಗ: ದೇಶದಲ್ಲಿ ಬಾಲಕಿಯರು, ಯುವತಿಯರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಮಠಾಧೀಶರು, ಪ್ರಗತಿಪರರು, ಬುದ್ಧಿಜೀವಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಭಾನುವಾರ ಧರಣಿ ನಡೆಸಿದರು.
ಮಹಿಳೆಯರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು. ಸಾಂಕೇತಿಕ ಧರಣಿ ಉದ್ದೇಶಿಸಿ ಸುಲಫಲ ಮಠದ ಮಹಾಂತ ಶಿವಾಚಾರ್ಯ, ವೇದಿಕೆ ಸಂಯೋಜಕಿ ಡಾ. ನಾಗರತ್ನಾ ದೇಶಮಾನ್ಯೆ, ಫಾದರ್ ಸ್ಟೇನಿ ಲೋವೋ ಮತ್ತಿತರರು ಮಾತನಾಡಿ, ಹೆಚ್ಚುತ್ತಿರುವ ಅತ್ಯಾಚಾರ ಪ್ರರಕರಣಗಳನ್ನು ಖಂಡಿಸುವುದರ ಜೊತೆಗೆ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಾಗರಗಾದ ಶಿವಬಸವ ಹರಳಯ್ಯ ಸ್ವಾಮೀಜಿ, ಚವಡಾಪುರ ಹಿರೇಮಠದ ರಾಜಶೇಖರ ಶಿವಾಚಾರ್ಯ, ಶಿವಾನಂದ ಸ್ವಾಮೀಜಿ, ಆತನೂರು ಶ್ರೀಗಳು, ಗೊಬ್ಬೂರವಾಡಿಯ ಬಳಿರಾಮ ಮಾರಾಜ, ಮರತೂರ ವಿರಕ್ತಮಠದ ಶ್ರೀಶೈಲ ಸ್ವಾಮೀಜಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!