ಗುಲ್ಬರ್ಗಾ

ಸಹ ಮಂಥನ ಕಾರ್ಯಕ್ರಮ 25ರಿಂದ

ಯಾದಗಿರಿ: ಜಿಲ್ಲಾ ಅಜೀಮ್ ಪ್ರೇಮಜೀ ಫೌಂಡೇಷನ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈಶಾನ್ಯ ಕರ್ನಾಟಕ ವಿಭಾಗದ ಶಿಕ್ಷಣ ಕ್ಷೇತ್ರದ ಪ್ರಯೋಗಗಳ ಸಂಶೋಧನಾ ಸಮ್ಮೇಳನವನ್ನು ಶಹಾಪುರ ತಾಲೂಕಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೂ ಸಹ ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  ಜು.25ರಂದು ಜಿಲ್ಲಾಧಿಕಾರಿ ಮನೋಜ್ ಜೈನ್ ಉದ್ಘಾಟಿಸುವರು. ರಾಯಚೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಬಿ.ಎಸ್. ಜನಗೌಡರ್, ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಎಚ್. ಬಾಲರಾಜು, ಡಾ. ಆರ್.ಎಸ್. ಗಿರಡ್ಡಿ, ವೀರಣ್ಣ ಜತ್ತಿ, ರಾಯಪ್ಪ ರೆಡ್ಡಿ, ಎಸ್.ವಿ. ಮಂಜುನಾಥ ಮತ್ತು ಡಿಡಿಪಿಐ ಡಿ.ಎಂ. ಹೊಸಮನಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.ನಂತರ ಬೆಳಗ್ಗೆ 10ಕ್ಕೆ 371(ಜೆ) ಕಲಂ ಮತ್ತು ಹೈದರಾಬಾದ್-ಕರ್ನಾಟಕ ಶಿಕ್ಷಣ ಕ್ಷೇತ್ರದ ಮೇಲೆ ಇದರ ಪರಿಣಾಮಗಳು ಎಂಬ ವಿಷಯದ ಮೇಲೆ ತಜ್ಞರಾದ ಡಾ. ಛಾಯಾ ದೇಗಾಂವಕರ್, ಡಾ. ಮೀನಾಕ್ಷಿ ಬಾಳಿ, ವೀರಣ್ಣ ಜತ್ತಿ ಅವರೊಂದಿಗೆ ಸಂವಾದ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!