ಸೇಡಂನಲ್ಲಿ ಪತ್ರಿಕಾ ದಿನಾಚರಣೆ ನಾಳೆ
ಸೇಡಂ: ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಜು.24ರಂದು ಬೆ. 10.15ಕ್ಕೆ ಪಟ್ಟಣದ ತಾಪಂ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಶಿವಕುಮಾರ ನಿಡಗುಂದ ತಿಳಿಸಿದ್ದಾರೆ. ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗಳ್ಳಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಸಿಪಿಐ ಸಂದೀಪಸಿಂಗ್ ಮರಗೋಡ, ತಾಪಂ ಇಒ ಮೋಹನ್ ಕಾಡಂನೋರ್ ಆಗಮಿಸುವರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್. ಶ್ರೀನಿವಾಸ ಅಧ್ಯಕ್ಷತೆ ವಹಿಸುವರು. ಹಿರಿಯ ವೈದ್ಯ ಡಾ. ಮುರಳಿಧರ ದೇಶಪಾಂಡೆ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಲಾಗಿದೆ.