ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನೌಕರರ ಸಮಸ್ಯೆ ಪರಿಹಾರಕ್ಕೆ ಯತ್ನ

Rashmi Kasaragodu
Updated On : 25 Jul 2014, 11:27 am

ಯಾದಗಿರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವತ್ತಿರುವ ಇಲಾಖೆಯ ನೌಕರರು ಹಲವಾರು ಸಮಸ್ಯೆ ಎದುರಿಸುತ್ತಿದ್ದು, ಬರುವ ದಿನಗಳಲ್ಲಿ ಪರಿಹಾರಕ್ಕೆ ಪ್ರಾಮಾಣಿಕವಾಗಿ ಯತ್ನಿಸುತ್ತೇನೆಂದು ಕೆಪಿಟಿಸಿಎಲ್ ನೌಕರರ ಕೇಂದ್ರ ಕಾರ್ಯಕಾರಿ ಸಮಿತಿಯ ನೂತನ ಸದಸ್ಯ ಹಣಮಂತರಡ್ಡಿ ಹೇಳಿದರು.
  ನಗರದ ಜೆಸ್ಕಾಂ ಕಚೇರಿ ಆವರಣದಲ್ಲಿ ಗುರುವಾರ ನೌಕರರ ಸಂಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನೌಕರರು ನೀಡಿರುವ ಗುರುತರ ಜವಬ್ದಾರಿಯನ್ನು ಅರಿತು ಕೆಲಸ ಮಾಡಿ ಇಲಾಖೆಗೆ ಒಳ್ಳೆಯ ಹೆಸರು ತರುತ್ತೇನೆ ಎಂದರು.
  ಈ ಹಿಂದೆ ಜಿಲ್ಲೆಯಲ್ಲಿ ಇಂಧನ ಇಲಾಖೆಯಿಂದ ಒಟ್ಟು 628 ಹುದ್ದೆಗಳು ಮಂಜೂರಾಗಿದ್ದು, 300 ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಒತ್ತಡದ ಮಧ್ಯೆ ಕೆಲಸ ಮಾಡಿ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ಬಂದಿರುವುದು ನೌಕರರ ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಶ್ಲಾಘಿಸಿದರು.
ಮುಂಜಾಗ್ರತೆ ಅಗತ್ಯ: ನೌಕರರ ಸಂಘವು ಈಗಾಗಲೇ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಅಪಘಾತಗಳು ಹೆಚ್ಚಾಗುತ್ತಿವೆ. ಕಾರಣ ನೌಕರರು ಕರ್ತವ್ಯ ಸಮಯದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡು ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.
  ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಾಘವೇಂದ್ರ, ಇಲಾಖೆಯಲ್ಲಿ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿರುವ ರಡ್ಡಿಯವರು ಆಯ್ಕೆಯಾಗಿರುವುದರಿಂದ ಬರುವ ದಿನಗಳಲ್ಲಿ ವಿಭಾಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
  ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ವೆಂಕಟೇಶ, ಶಾಂತಪ್ಪ ಪೂಜಾರಿ, ನೌಕರರ ಸಂಘದ ಹೊನ್ನಪ್ಪ, ಶ್ರೀನಿವಾಸ,ಶ್ರೀಶೈಲ್, ಬಸವರಾಜ ಪಾಟೀಲ್, ಮೈಲಾರಲಿಂಗ ಸುರಪುರ, ಬಸವರಾಜ ಕೋರೆ, ಇಲಿಯಾಸ್ ಅಹ್ಮದ್, ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement