ಗುಲ್ಬರ್ಗಾ

ಎಂಇಎಸ್ ಪುಂಡಾಟಿಕೆಗೆ ಖಂಡನೆ

ಯಾದಗಿರಿ: ಮಹಾರಾಷ್ಟ್ರ ಏಕೀಕರಣ ಸಮಿತಿ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನೇ ಧಿಕ್ಕರಿಸಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ. ಗದ್ದುಗೆ, ಕನ್ನಡಿಗರಿಗೆ ದ್ರೋಹ ಮಾಡುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕನ್ನಡ ವಿರೋಧಿಗಳನ್ನು ಗಡಿಪಾರು ಮಾಡಿ ಎಂದು ಗುಡುಗಿದರು.
ಮಹಾರಾಷ್ಟ್ರ ರಾಜ್ಯ ಯಳ್ಳೂರು ಎಂಬ ಮರಾಠಿ ನಾಮಫಲಕ ಕೂಡಲೇ ತೆರವುಗೊಳಿಸಬೇಕು. ಜಿಲ್ಲಾಡಳಿತಕ್ಕೆ ವಿಶೇಷ ಪೊಲೀಸ್ ವ್ಯವಸ್ಥೆ ಒದಗಿಸಿ ಕರ್ನಾಟಕ ನಾಮಫಲಕ ಹಾಕಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶರಣು ಇಟಗಿ, ದೇವು ಪಾಟೀಲ್, ಸಿದ್ದುರಡ್ಡಿ, ರವಿ ತಡಿಬಿಡಿ, ಬಾಪುಗೌಡ, ಕಾಶಿಂ ಪಟೇಲ್, ಗೌಡಪ್ಪ ಕೋರಿ, ನಾಗು, ಶರಣು, ಅನೀಲ ಚವ್ಹಾಣ, ರಮೇಶ, ಶಿನು ಖಾನಾಪುರ, ಆನಂದ ಹಣಮಂತ, ಸಾಬಣ್ಣ, ಚೇತನ, ಮರಿಲಿಂಗ, ಶಿವು ಯರಗೋಳ, ಶೇರಅಲಿ, ನಿತ್ಯಾನಂದ ಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!