ಅವೈಜ್ಞಾನಿಕ ಚರಂಡಿ ಕಾಮಗಾರಿ: ಕ್ರಮಕ್ಕೆ ಆಗ್ರಹ
ಯಾದಗಿರಿ: ನಗರದ 31ನೇ ವಾರ್ಡ್ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟೋಕರಿ ಕೋಲಿ (ಕಬ್ಬಲಿಗ) ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಕಾಮಗಾರಿ ವೀಕ್ಷಿಸಲು ನಗರಸಭೆಯ ಯಾವೊಬ್ಬ ಅಧಿಕಾರಿಯೂ ಬಾರದೆ ಇರುವುದು. ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿದೆ. ಈ ಹಿಂದೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಾತಾ ಮಾಣೀಕೇಶ್ವರಿ ನಗರದ 60 ಅಡಿ ರಸ್ತೆಯಿಂದ 80 ಅಡಿ ರಸ್ತೆಗೆ ಕೂಡುವ ವೃತ್ತದಲ್ಲಿ ಕಾಮಗಾರಿ ನೋಡಿದರೆ ಮಳೆ ರಭಸಕ್ಕೆ ಮೊನ್ನೆ ತಾನೆ ನಿರ್ಮಿಸಿದ ಚರಂಡಿ ಕಿತ್ತು ಹೋಗುವಂತಾಗಿದೆ ಎಂದು ಆರೋಪಿಸಿದ್ದಾರೆ. ಕಾರಣ ತಕ್ಷಣ ಸಂಬಂಧಪಟ್ಟವರು ಸ್ಥಳ ಪರಿಶೀಲನೆ ಮಾಡಿ ಕಾಮಗಾರಿ ಜನ ಉಪಯೋಗವಾಗುವಂತೆ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.