ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪ್ರಾಚಾರ್ಯರ ಅಮಾನತಿಗೆ ಕಿಡಿ

Vishwanath S
Updated On : 14 Jun 2014, 11:55 am

ಗುಲ್ಬರ್ಗ: ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆ ಪ್ರಕ್ರಿಯೆಯಲ್ಲಿ ಮತದಾರರಿಗಿರುವ ಶಿಕ್ಷಕರು ಪಾಲ್ಗೊಂಡರೆ ಅವರನ್ನು ಶಿಕ್ಷಿಸುವ ಕ್ರಮ ತಪ್ಪು ಎಂದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ.ಬಿ. ಅಂಬಲಗಿ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ಸೂಚಕರು ಅನುಮೋದಕರು ಶಿಕ್ಷಕರೇ ಆಗಿರಬೇಕಾಗಿರುತ್ತದೆ. ಹಾಗಾದರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆ? ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಬಗ್ಗೆ ಶಿಕ್ಷಕ ವೃಂದಕ್ಕೆ ಸ್ಪಷ್ಟ ನಿರ್ದೇಶನವಿಲ್ಲ. ಆದ್ದರಿಂದ ಪ್ರಾದೇಶಿಕ ಆಯುಕ್ತರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ಅಭ್ಯರ್ಥಿಗಳನ್ನು ಭೇಟಿ ಮಾಡಲು ಶಿಕ್ಷಕರು ಹಿಂದೇಟು ಹಾಕುತ್ತಿದ್ದಾರೆ. ಹಾಗಿದ್ದರೆ, ಶಿಕ್ಷಕರ ಕ್ಷೇತ್ರ ಯಾಕೆ ಬೇಕು? ನನ್ನೊಂದಿಗೆ ಪತ್ರಿಕಾಗೋಷ್ಟಿಯಲ್ಲಿದ್ದಾರೆ ಎಂಬ ಕಾರಣಕ್ಕೆ ರಾಜೇಂದ್ರ ಎರನಾಳ ಅವರನ್ನು ಅಮಾನತ್ತು ಮಾಡಲಾಗಿದೆ. ಮೇ.29 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನಿನ್ನೂ ಸರ್ಕಾರಿ ನೌಕರನಾಗಿದ್ದೆ. ನನ್ನ ರಾಜೀಮನಾಮೆ ಅಂಗೀಕಾರವಾಗಿರಲಿಲ್ಲ. ಹಾಗಿದ್ದ ಮೇಲೆ ನನ್ನ ಮೇಲೆ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.
ನೀತಿ ಸಂಹಿತೆ ಉಲ್ಲಂಘನೆ: ಆರೋಪ
ಗುಲ್ಬರ್ಗ: ಚಿತ್ತಾಪುರ ಸರ್ಕಾರಿ ಪದವಿ ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ.ರಾಜೇಂದ್ರ ಯರನಾಳೆ ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳು 1966ರ 5 (4) ಅಡಿಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈಶಾನ್ಯ ಶಿಕ್ಷಕ ಮತಕ್ಷೇತ್ರ ಚುನಾವಣಾಧಿಕಾರಿ, ಪ್ರಾ. ಆಯುಕ್ತ ಅಮ್ಲನ್ ಆದಿತ್ಯಾ ಬಿಸ್ವಾಸ್ ಅಮಾನತು ಆದೇಶ ಹೊರಡಿಸಿದ್ದಾರೆ. ಪ್ರಾಚಾರ್ಯರು ಈಶಾನ್ಯ ಶಿಕ್ಷಕ ಮತಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿರುವ ಎಂ. ಬಿ. ಅಂಬಲಗಿ ಅವರ ಪರ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂಬ ಆರೋಪ ಹೊತ್ತಿದ್ದರು.   
ಕೆಸಿಎಸ್‌ಆರ್ ನಿಯಮಗಳ ಪ್ರಕಾರ ಯಾವುದೇ ಸರ್ಕಾರಿ ನೌಕರ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಮಾಡುವಂತಿಲ್ಲ, ಪ್ರಭಾವ ಬೀರುವಂತಿಲ್ಲ. ಸದರಿ ಪ್ರಕರಣದಲ್ಲಿ ಡಾ. ರಾಜೇಂದ್ರ ಯರನಾಳೆ ಸರ್ಕಾರಿ ನೌಕರಿಯಲ್ಲಿದ್ದೇ ಚುನಾವಣೆಯವಲ್ಲಿ ಸ್ಪಧಿಸಿದ್ದ ಅಂಬಲಗಿ ಅವರ ಪರ ಪತ್ರಿಕಾಗೋಷ್ಠಿಯಲ್ಲಿ ಬಾಗವಹಿಸಿದ್ದಾರೆ. ಇದು ನಾಗರಿಕ ಸೇವಾ (ನಡತೆ) ನಿಯಮಗಳ ಉಲ್ಲಂಘನೆ.
ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರು ಉಪನ್ಯಾಸಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಉಪನ್ಯಾಸಕರಾದ ಶಾಂತಕುಮಾರ ಹೆಬಳಿ ಹಾಗೂ ಟನ್ನಮಲ್ಲಪ್ಪ ಕಲ್ಪೆ ಇವರು ಪಕ್ಷೇತರ ಅಭ್ಯರ್ಥಿ ಲಿಂಗರಾಜ ಬಿರಾದಾರ್ ಪರ ಪ್ರಚಾರ ಮಾಡಿದ್ದಾರೆ. ಆರೋಪದ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡಲಾಗಿದೆ.
ನಮೋಶಿ ಪರ ಮತಯಾಚನೆ
ಹುಣಸಗಿ: ಶಿಕ್ಷಕರ ಸಮಸ್ಯೆಗಳ ಕುರಿತು ಕಾಳಜಿ ಹೊಂದಿರುವ ಅಭ್ಯರ್ಥಿ ನಮೋಶಿ ಅವರಿಗೆ ಮತ ನೀಡಬೇಕೆಂದು ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಮೇಲಿನಮನಿ ಮನವಿ ಮಾಡಿದರು. ಪಟ್ಟಣದ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು ಮತ್ತು ಇತರ ಭಾಗಗಳಲ್ಲಿ ಮತಯಾಚಿಸಿ, ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಶಿಕ್ಷಕರ ವಿಭಾಗ ಮಟ್ಟದ ಸಮಸ್ಯೆಗಳನ್ನು ಪರಿಹರಿಸಿದ್ದಾರೆ ಎಂದು ತಿಳಿಸಿದರು. ಮುಖಂಡರಾದ ಚಂದ್ರಶೇಖರ ದಂಡಿನ್ ಮಾತನಾಡಿದರು.
ಮುಖಂಡರಾದ ಮಲ್ಲಿಕಾರ್ಜುನ ಹಿರೇಮಠ, ಕಾಂತು ತೆಗ್ಗೆಳಿ, ದೇವಿಂದ್ರ ಚಲುವಾದಿ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement