ಬಿರುಸಿನ ಮತದಾನ
ಚಿತ್ತಾಪುರ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗಾಗಿ ಶುಕ್ರವಾರ ನಡೆದ ಮತದಾನ ಪಟ್ಟಣದ ಮತ ಕೇಂದ್ರದಲ್ಲಿ ಬಿರುಸಿನಿಂದ ನಡೆಯಿತು.
ತಹಸೀಲ್ದಾರ್ ಕಚೇರಿಯಲ್ಲಿ ಮತದಾನ ಕೇಂದ್ರ ಹಾಗೂ ವಾಡಿಯಲ್ಲಿ ತಲಾ ಮತದಾನ ಕೇಂದ್ರ ಸ್ಥಾಪಿಸಲಾಗಿತ್ತು. ಚಿತ್ತಾಪುರದಲ್ಲಿ 329 ಮತದಾರರ ಪೈಕಿ 199 ಮತದಾರರು ಮತಚಲಾಯಿಸಿದ್ದಾರೆ. ವಾಡಿ ಮತಕೇಂದ್ರದಲ್ಲಿ 170 ಮತದಾರರ ಪೈಕಿ 86 ಮತದಾರರು ಮತ ಚಲಾಯಿಸಿದ್ದಾರೆ.
ಮತದಾನದ ಸಮೀಪದ ರಾಜಕೀಯ ಪಕ್ಷಗಳ ಮುಖಂಡರು ಶಿಕ್ಷಕರಿಗೆ ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವೊಲಿಕೆ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಶಹಾಬಾದ್: ಶೇ.56
ಶಹಾಬಾದ್: ಈಶಾನ್ಯ ಮತಕ್ಷೇತ್ರದ ಚುನಾವಣೆಯಲ್ಲಿ ಗಂಜ್ ಏರಿಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮತದಾನದಲ್ಲಿ ಶೇ.56.30 ರಷ್ಟು ಮತದಾನವಾಗಿದೆ.
ಬೆಳಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆದರೆ, ಬಿಸಿಲು ಹೆಚ್ಚುತ್ತಿದ್ದಂತೆ ಮತದಾನ ಕಡಿಮೆಯಾಯಿತು. ಮತಗಟ್ಟೆಗೆ ಆಗಮಿಸಿದ ಮತದಾರರನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮನವೊಲಿಸುವ ಕಸರತ್ತು ನಡೆಸುತ್ತಿರುವುದು ಕಂಡು ಬಂದಿತು.
ಮತದಾರರಿಗೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣದ ಸರಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮತದಾನದಲ್ಲಿ ಶೇ.50 ರಷ್ಟು ಮತದಾನ ನಡೆದಿದ್ದು, ಒಟ್ಟು 169 ಮತದಾರರಲ್ಲಿ 84 ಜನ ಮತ ಚಲಾಯಿಸಿದ್ದಾರೆ.
ತಾಪಂ ಹಂಗಾಮಿ ಅಧ್ಯಕ್ಷರ ಆಯ್ಕೆ
ಜೇವರ್ಗಿ: ತಾಲೂಕು ಪಂಚಾಯಿತಿ ಹಂಗಾಮಿ ಅಧ್ಯಕ್ಷರಾಗಿ ನೆಲೋಗಿ ಕ್ಷೇತ್ರದ ತಾಲೂಕು ಪಂಚಾಯಿತಿ ಸದಸ್ಯ ಅಪ್ಪಾಸಾಬ್ ಹೊಸಮನಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲನಗೌಡ ಪಾಟೀಲ್ ನೇದಲಗಿ ಅವರ ಅಧಿಕಾರ ಜೂ.11ರಂದು ಕೊನೆಗೊಂಡಿದ್ದರಿಂದ ಹೊಸಮನಿ ಅವರನ್ನು ಹಂಗಾಮಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಪಲ್ಲಾನರಸಿಂಹರೆಡ್ಡಿ ಮೊದಲಾದವರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.