ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಇಂದು

Rashmi Kasaragodu
Updated On : 22 Jun 2014, 12:07 pm

ಗುಲ್ಬರ್ಗ: ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ವಿಕಲಚೇತನರಿಗೆ ಜೂ.22ರಂದು ಬೆ.10.30ಕ್ಕೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭವನ್ನು ಹಮ್ಮಿಕೊಂಡಿದೆ. ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ, ಜಿಪಂ ಅಧ್ಯಕ್ಷೆ ಕಸ್ತೂರಿಬಾಯಿ ಗೌಡ್ತಿ, ಪಾಲಿಕೆ ಮಹಾಪೌರರಾದ ಅಲಿಯಾ ಸಿರೀನ್ ಆಗಮಿಸುವರು. ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ.ಎಚ್.ಎಂ. ಕುಮಾರ್ ಗೌರವ ಉಪಸ್ಥಿತಿಯಲ್ಲಿರುವರು. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು ಎಂದು ಸಂಸ್ಥೆಯ ಸಭಾಪತಿ ಅಪ್ಪಾರಾವ್ ಅಕ್ಕೋಣಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement