ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Rashmi Kasaragodu
Updated On : 22 Jun 2014, 12:06 pm

ಯಾದಗಿರಿ: 2014-15ನೇ ಸಾಲಿನ ಯಾದಗಿರಿ ಪಟ್ಟಣ ಹಾಗೂ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲೆಯಲ್ಲಿನ ವಿವಿಧ ಮೆಟ್ರಿಕ್ ನಂತರದ ಬಾಲಕ- ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ, ಪದವಿ ಕೋರ್ಸ್‌ಗಳು, ಐಟಿಐ, ಡಿಪ್ಲೊಮಾ, ಡಿಇಡಿ, ಇತರೆ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಹರು. ಅರ್ಜಿಯೊಂದಿಗೆ ಹಿಂದಿನ ವರ್ಷ ಪಾಸಾದ ದೃಢೀಕೃತ ಅಂಕಪಟ್ಟಿ, ತಹಸೀಲ್ದಾರರಿಂದ ಪಡೆದ ಜಾತಿ- ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಇತ್ತೀಚಿನ 2 ಭಾವಚಿತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯನ್ನು ಎಲ್ಲ ಜೆರಾಕ್ಸ್ ಪ್ರತಿಗಳಿಗೆ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಸಲ್ಲಿಸುವುದು. ಅರ್ಜಿಗಳನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಬಾಲಾಜಿ ಮಂದಿರ ರಸ್ತೆ ಯಾದಗಿರಿ ಅಥವಾ ಸಂಬಂಧಪಟ್ಟ ನಿಲಯ ಪಾಲಕರಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಬಿಸಿಎಂ ಕಾರ್ಯಾಲಯಕ್ಕೆ ಜು.19ರೊಳಗೆ ಸಲ್ಲಿಸಬೇಕೆಂದು ಇಲಾಖೆಯ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement