ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಆಳಂದದಲ್ಲಿ ಬೆಂಬಲಿಗರ ಸಂಭ್ರಮಾಚರಣೆ

Rashmi Kasaragodu
Updated On : 25 Jun 2014, 11:14 am

ಆಳಂದ: ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಅವರು ಸೋಮವಾರ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹಮದ್ ಮಕ್ದುಮ್ ಅನ್ಸಾರಿ ಕಾಲೇಮಿರ್ ನೇತೃತ್ವದಲ್ಲಿ ಸೋಮವಾರ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿ ಶಿಕ್ಷಕರು ಸ್ಥಳೀಯ ಬಸ್ ನಿಲ್ದಾಣ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ಮುಖಂಡ ಸಿದ್ದಯ್ಯ ಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ಮಾಡಿಯಾಳ, ಶಿಕ್ಷಕ ಮಾಣಿಕ ಜಾಧವ, ಸೋಮನಾಥ ಜಳಕೋಟಿ, ಪಾಂಡುರಂಗ ಮೊದಲೆ, ಶಾಂತಪ್ಪ ವಚ್ಚೆ, ಸಂಗನಗೌಡ ಪಾಟೀಲ್ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement