ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನೂತನ ವಿದ್ಯುತ್ ತಂತಿಗಾಗಿ ಗ್ರಾಮಸ್ಥರ ಆಗ್ರಹ

Rashmi Kasaragodu
Updated On : 25 Jun 2014, 11:14 am

ಯಾದಗಿರಿ: ಮನೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿಗಳನ್ನು ಜೆಸ್ಕಾಂ ಅಧಿಕಾರಿಗಳು ಕೂಡಲೇ ಬದಲಾಯಿಸುವಂತೆ ಅಚ್ಚೊಲಾ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮದ ವಿವಿಧೆಡೆ ವಿದ್ಯುತ್ ತಂತಿಗಳು ಜೋತು ಬಿದ್ದಿವೆ. ಹೀಗಾಗಿ ಯಾವುದೇ ಸಂದರ್ಭದಲ್ಲಿಯೂ ಹರಿದು ಬೀಳುವ ಸಾಧ್ಯತೆ ಹೆಚ್ಚಳವಾಗಿದೆ. ಇದರಿಂದಾಗಿ ಭಯದ ವಾತಾವರಣದಲ್ಲಿ ಓಡಾಡಾವಂತಾಗಿದೆ ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ. ವಿದ್ಯುತ್ ಕಂಬಗಳ ನಡುವಿನ ಅಂತರ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿಗೆ ಇದ್ದ ಕಾರಣ ವಿದ್ಯುತ್ ತಂತಿಗಳು ಜೊತು ಬಿದ್ದಿವೆ. ಆಕಸ್ಮಿವಾಗಿ ಹರಿದು ಬಿದ್ದರೆ ಜೀವಕ್ಕೆ ಅಪಾಯ ಖಚಿತವಾಗಿದೆ. ಅಮಾಯಕರು ಪ್ರಾಣ ಕಳೆದುಕೊಳ್ಳುವಂತಹ ಪರಿಸ್ಥಿತಿ ಒದಗಿ ಬಂದಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಿದೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement