ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಶಿಕ್ಷಕರ ಕೊರತೆ ನೀಗಿಸಿ'

Rashmi Kasaragodu
Updated On : 26 Jun 2014, 11:58 am

ಜೇವರ್ಗಿ: ತಾಲೂಕಿನ ವರ್ಚನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 7 ತರಗತಿಗಳಿದ್ದು, ಕೇವಲ ಮೂವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ತಕ್ಷಣ ಇನ್ನೂ ಮೂವರು ಶಿಕ್ಷಕರನ್ನು ನೇಮಕ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವರ್ಚನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯವರೆಗೆ ಒಟ್ಟು 150 ಜನ ಮಕ್ಕಳ ದಾಖಲಾತಿಯಿದೆ. 140 ಮಕ್ಕಳ ಹಾಜರಾತಿಯಿದೆ. ಕೇವಲ ಮೂವರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.   ಈ ಶಾಲೆಗೆ ತಕ್ಷಣ ಇನ್ನೂ ಮೂವರು ಶಿಕ್ಷಕರನ್ನು ನಿಯೋಜಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಕ್ಷಣ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು  ಗ್ರಾಮಸ್ಥರು ಮನವಿ ಪತ್ರದ ಮೂಲಕ ಎಚ್ಚರಿಸಿದ್ದಾರೆ. ಕರವೇ ತಾಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಹಾಲಗಡ್ಲ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ತಮ್ಮಣ ಪೂಜಾರಿ, ಭೀಮಸಿಂಗ್, ಸಾಯಬಣ್ಣ ಕವಾಲ್ದಾರ್, ಸಂತೋಷ ಪೂಜಾರಿ, ಈರಣ್ಣಗೌಡ ಗುಳ್ಯಾಳ ಹಾಗೂ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement