ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕೂಲಿ ಕಾರ್ಮಿಕರ ರಕ್ಷಣೆಗೆ ಒತ್ತಾಯ

Lingaraj Badiger
Updated On : 28 Jun 2014, 11:27 am

ಗುಲ್ಬರ್ಗ: ಜಿಲ್ಲೆಯಲ್ಲಿ ಬರಗಾಲ ಛಾಯೆ ಆವರಿಸಿದ್ದು, ರೈತರ ಮತ್ತು ಕೂಲಿಕಾರರ ರಕ್ಷಣೆಗೆ ಸರ್ಕಾರ ಬರಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತಸಂಘ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಏಷ್ಯಾ ಖಂಡದಲ್ಲಿ ಎಲ್ ನಿನೋ ಮಾರುತದಿಂದ ಮಳೆ ಕೊರತೆಯುಂಟಾಗುತ್ತಿದೆ ಎಂದು ಹವಾಮಾನ ತಜ್ಞರು ಹೇಳಿರುವುದರಿಂದ ರೈತರು ಆತಂಕದಲ್ಲಿದ್ದಾರೆ. ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಕೊರತೆಯುಂಟಾಗಲಿದೆ. ಜಿಲ್ಲೆಯಲ್ಲಿ ಜೂನ್, ಜುಲೈ, ಆಗಸ್ಟ್‌ನಲ್ಲಿ ತಿಂಗಳಿನಲ್ಲಿ ಶೇ.60ರಷ್ಟು ಮಳೆ ಕೊರತೆಯುಂಟಾಗಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ ಬರಗಾಲ ಎದುರಿಸಲು ಸರ್ಕಾರ ಇನ್ನೂ ಸಿದ್ಧವಾಗಬೇಕೆಂದು ಪ್ರಧಾನ ಕಾರ್ಯದರ್ಶಿ ಗೌರಮ್ಮ ಪಾಟೀಲ್ ಒತ್ತಾಯಿಸಿದ್ದಾರೆ. ಬರಗಾಲದಿಂದ ತುತ್ತಾಗುವ ಜಿಲ್ಲೆಗಳಲ್ಲಿ ಕೂಡಲೇ ರೈತರಿಗೆ ಸೂಕ್ತ ಪರಿಹಾರ ಒದಗಿಸಿಬೇಕು. ದನಕರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಹಣ ನೀಡದಿರುವುದರಿಂದ ಕಳೆದ 2 ತಿಂಗಳಿಂದ ಕೆಲಸ ಸ್ಥಗಿತಗೊಂಡಿದೆ. ಒಂದು ಕಡೆ ಕೃಷಿ ಕೆಲಸಗಳು ಮತ್ತೊಂದೆಡೆ ಉದ್ಯೋಗ ಖಾತ್ರಿ ಕೆಲಸಗಳು ಸ್ಥಗಿತಗೊಳಿಸಿರುವುದರಿಂದ ಕೂಲಿಕಾರರು ಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಬೆಳೆ ವಿಮೆ ಯೋಜನೆ ಕಂತು ಕಟ್ಟಲು ಜು.31ರ ವರೆಗೆ ವಿಸ್ತರಿಸಬೇಕೆಂದು ಜಿಪಂ ಸಿಇಒ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement