ಕೊಳವೆ ಬಾವಿ ಮುಚ್ಚಿ ಸಲು ಮನವಿ
ಯಾದಗಿರಿ: ಜಿಲ್ಲೆಯಾದ್ಯಂತ ಬಾಯಿ ತೆರೆದು ನಿಂತಿರುವ ಕೊಳವೆ ಬಾವಿಗಳನ್ನು ಮುಚ್ಚಲು ಕೂಡಲೇ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಟೋಕರ ಕೋಲಿ ಸಮಾಜ ಅಧ್ಯಕ್ಷ ಉಮೇಶ ಮುದ್ನಾಳ ಹೇಳಿದರು. ಬಾಯಿ ತೆರೆದು ನಿಂತಿರುವ ಕೊಳವೆ ಬಾವಿಗಳು ಜಿಲ್ಲೆಯೆಲ್ಲೆಡೆ ಸಾಕಷ್ಟಿವೆ. ರೈತರು ಹೊಲಗಳಲ್ಲಿ, ಮನೆ ನಿರ್ಮಾಣ, ಇನ್ನಿತರ ಕೆಲಸ ಕಾರ್ಯಗಳಿಗಾಗಿ ಕೊಳವೆ ಬಾವಿ ಕೊರೆದಿದ್ದು, ನೀರು ಬಾರದಿರುವ ಕೊಳವೆಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿದೆ. ಜಿಲ್ಲಾಡಳಿತ ಕೂಡಲೇ ಇಂತ ಕೊಳವೆ ಬಾವಿಗಳನ್ನು ಪತ್ತೆ ಹಚ್ಚಿ ಮುಚ್ಚುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮುಚ್ಚಿಸುವ ಸುತ್ತೋಲೆ ಹೊರಡಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಬೇಕು. ಸರ್ಕಾರ ವಿಶೇಷ ಆಸಕ್ತಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು. ಇಲ್ಲವಾದರೆ ಮುಂದಾಗುವು ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಜಿಲ್ಲಾ ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ್ ಮುದ್ನಾಳ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.