ಪ್ರತಿಭಾ ಪುರಸ್ಕಾರಕ್ಕೆ ಬ್ರಾಹ್ಮಣ ಮಹಾಸಭಾ ಅರ್ಜಿ ಆಹ್ವಾನ
ರಾಯಚೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಶಾಖೆಯಿಂದ ಜು.27ರಂದು ನಗರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಗಾಯನ ಸ್ಪರ್ಧೆ, ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಹಾಸಭಾದ ಪ್ರಕಟಣೆ ತಿಳಿಸಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲರೂ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಅದೇ ರೀತಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದವರನ್ನು ಸಹ ಸನ್ಮಾನಿಸಲಾಗುತ್ತದೆ. ಈ ಕುರಿತು ವಿದ್ಯಾರ್ಥಿ ಸಾಧಕರು ತಮ್ಮ ಸಂಪೂರ್ಣ ಮಾಹಿತಿಯನ್ನು ಮಹಾಸಭಾಕ್ಕೆ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಕೆಗೆ ಜು.20 ಕಡೆಯ ದಿನವಾಗಿದ್ದು, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಯಸುವ ಅರ್ಹರು ಡಾ. ಆನಂದ ತೀರ್ಥ ಫಡ್ನೀಸ್-9448695874, ವೆಂಕಟೇಶ ನವಲಿ- ಮೊ. 9449761975, ಸಂಕರ್ಷಣ- 9480284359, ಪ್ರಾಣೇಶ್ ಮುತಾಲಿಕ್- 9448001479, ಎ.ಸುಧೀರ್- 9845546649, ತಾರಾನಾಥ- 9740312794ಗೆ ಸಂಪರ್ಕಿಸಲು ಕೋರಿದೆ.
ದ್ವಿತೀಯ ಪಿಯು ಪರೀಕ್ಷೆ:ನಿಷೇಧಾಜ್ಞೆ ಜಾರಿ
ರಾಯಚೂರು: ಜಿಲ್ಲಾದ್ಯಂತ ಜು.3ರಿಂದ 12ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯವನ್ನು ಸುಗಮ ಹಾಗೂ ಕಾನೂನು ಬದ್ಧವಾಗಿ ನಡೆಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಮೊಬೈಲ್ ಪೋನ್, ಪಠ್ಯ ಪುಸ್ತಕಗಳನ್ನು ಹಾಗೂ ಕ್ಯಾಲ್ಕುಲೇಟರ್ ತರುವುದನ್ನು ನಿಷೇಧಿಸಿದ್ದಾರೆ.