ರೈತರಿಗೆ ಸಾಮರ್ಥ್ಯ ಅಭಿವೃಧ್ದಿ ತರಬೇತಿ
ಯಾದಗಿರಿ: ಕೃಷಿ ಇಲಾಖೆ ಹಾಗೂ ಸಮತಾ ಲೋಕಾ ಶಿಕ್ಷಣ ಸಮಿತಿ ಸಂಯುಕ್ತಾಶ್ರಯದಲ್ಲಿ ಸಾವಯುವ ಭಾಗ್ಯ ಯೋಜನೆಯ ಅಡಿಯಲ್ಲಿ ರೈತರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ತಾಲೂಕಿನ ಯದ್ಲಾಪುರ ಗ್ರಾಮದಲ್ಲಿ ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ ಸದಸ್ಯ ಕೃಷ್ಣ, ರೈತರು ರಾಸಾಯನಿಕ ಗೊಬ್ಬರಗಳನ್ನು ಬಳಸದೆ ಸಾವಯವ ಕೃಷಿ ಮಾಡಿಕೊಂಡು ಉತ್ತಮವಾದ ಬೆಳೆಯನ್ನು ಬೆಳೆಯಬೇಕು ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೆಕು ಎಂದು ಹೇಳಿದರು. ಗುರಮಿಠಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕೇದರನಾಥ ಹಿರೇಮಠ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ರೈತರು ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸುವುದರಿಂದ ಭೂಮಿಯ ಫಲವತ್ತತೆ ನಶಿಸುತ್ತಿದೆ. ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದರು.
ಸಾವಯವ ಕೃಷಿ ಸಂಘದ ವಿಶ್ವನಾಥರೆಡ್ಡಿ ಮಾತನಾಡಿ, ಸಾವಯುವ ಕೃಷಿ ಸಂಘದ ರಚನೆ, ಸಂಘದ ಕಾರ್ಯಗಳು ಹಾಗೂ ಅಧ್ಯಕ್ಷನ ಕಾರ್ಯಗಳು ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.