ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ದೇವಿಕೇರಾದಲ್ಲಿ ಅಗ್ನಿ ದುರಂತ: ಹೋಟೆಲ್‌ಗಳು ಭಸ್ಮ

Vishwanath S
Updated On : 2 Mar 2014, 12:03 pm

ಸುರಪುರ:ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಅಗ್ನಿದುರಂತದಲ್ಲಿ ಮೂರು ಹೋಟೆಲ್‌ಗಳು ಉರಿದು ಭಸ್ಮವಾಗಿರುವ ಘಟನೆ ಶನಿವಾರ ಬೆಳಗ್ಗೆ ಜರುಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿ ತಾಲೂಕು ಘಟಕದ ಮುಖಂಡರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೋಟೆಲ್ ಮಾಲೀಕರಿಗೆ ವೈಯಕ್ತಿಕವಾಗಿ ತಲಾ 5 ಸಾವಿರ ಧನ ಸಹಾಯ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಶಂಕರನಾಯಕ ಮಾತನಾಡಿ, ಬಡತನದಲ್ಲಿ ಚಹಾ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿರುವವರಿಗೆ ಅಗ್ನಿ ದುರಂತದಿಂದ ಕುಟುಂಬಗಳು ಬೀದಿಗೆ ಬೀಳುವಂತಾಗಿವೆ.
ಪುನಃ ಚಹಾದ ಅಂಗಡಿಗಳನ್ನು ಇಟ್ಟುಕೊಂಡು ಜೀವನ ಸಾಗಿಸಲಿ ಎಂಬ ಉದ್ದೇಶದಿಂದ ಅಲ್ಪ ಸಹಾಯವನ್ನು ನೀಡುತ್ತಿದ್ದೇವೆ. ಈ ಹಣವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖಂಡರಾದ ಪ್ರಕಾಶ ಗುತ್ತೇದಾರ್, ಭೀಮಣ್ಣ ಬೇವಿನಾಳ, ಜಕಪ್ಪ ಕಟ್ಟಿಮನಿ, ಚಾಂದ ಪಾಷಾ, ಮಲ್ಕಣ್ಣ ಯಾದವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement