ಶಾಸಕ ದತ್ತಾತ್ರೇಯ ಜನ್ಮದಿನ
ಗುಲ್ಬರ್ಗ: ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರರ 32 ಜನ್ಮದಿನವನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರೇವೂರ ಅವರ ಮನೆಯಲ್ಲಿ ಆಚರಿಸಿದರು. ಈ ಸಂದರ್ಭದಲ್ಲಿ ಮೋರ್ಚಾ ನಗರ ಘಟಕದ ಅಧ್ಯಕ್ಷ ರಾಮಚಂದ್ರ ರೆಡ್ಡಿ, ಶರಣ ರೆಡ್ಡಿ, ಪ್ರಶಾಂತ ಅಂಕಲಗಿ, ಯಶವಂತ, ಭಾಗರೆಡ್ಡಿ, ಸಚಿನ್ ಬನ್ನಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಪದಾಧಿಕಾರಿಗಳ ಸಭೆ
ಗುಲ್ಬರ್ಗ: ಗುಲ್ಬರ್ಗ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯಿತು. ಗುಲ್ಬರ್ಗ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಈರಣ್ಣ ಎಂ. ಝಳಕಿ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಗುರುರಾಜ ಕುಲ್ಕರ್ಣಿ, ಲಿಂಗರಾಜ ತಾರಫೈಲ್, ಸತೀಶ ಸ್ವಾಮಿ, ರೋಶನ್ ಕೆಡಕರ್, ಇರ್ಫಾನ್ ಸರಡಗಿ ಇನ್ನಿತರರು ಉಪಸ್ಥಿತರಿದ್ದರು.