ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪರಿಸರ ಮಿತ್ರ ಶಾಲೆ: ಗಾಜರಕೋಟ್ ಸಾಧನೆ

Rashmi Kasaragodu
Updated On : 10 Mar 2014, 11:13 am

ಗುರುಮಠಕಲ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಳ್ಳಾರಿಯ ಗೌತಮ ಬುದ್ಧ ಸ್ಮಾರಕ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆದ, 2013-14ನೇ ಸಾಲಿನ ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲೆಯ ಸ್ಪರ್ಧೆಯಲ್ಲಿ ಗಾಜರಕೋಟ್ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಮಾದರಿಯಾಗಿದೆ.
  ಇಂದಿನ ಪರಿಸರ ಮಾಲಿನ್ಯಭರಿತ ದಿನಗಳಲ್ಲಿ ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಭಾವಿಸಿ ಇಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಶಾಲೆ ಆವರಣದಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರ ರಕ್ಷಣೆಯಲ್ಲಿ ತೊಡಗಿದ್ದಕ್ಕೆ ಗಣ್ಯರು ಶ್ಲಾಘಿಸಿದ್ದಾರೆ. ಪರಿಸರ ಮಿತ್ರ ಶಾಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕೆ ಎಸ್‌ಡಿಎಮ್‌ಸಿ ಅಧ್ಯಕ್ಷ ಅಶೋಕ ಕಲಾಲ್ ಮತ್ತು ಸದಸ್ಯರು, ಶಾಲೆ ಮುಖ್ಯಗುರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement