ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪ್ರಾಮಾಣಿಕವಾಗಿ ಕೆಲಸ ಮಾಡಿ

Srinivasa Murthy VN
Updated On : 11 Mar 2014, 12:51 pm

ಯಾದಗಿರಿ: ಗ್ರಾಮೀಣ ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ನಡೆಸಬೇಕು. ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಕರವೇ ಜಿಲ್ಲಾ ಅಧ್ಯಕ್ಷ ಟಿ. ಎನ್. ಭೀಮುನಾಯಕ ಕಾರ್ಯಕರ್ತರಿಗೆ ಕರೆ ನೀಡಿದರು.
ರಾಮಸಮುದ್ರ ಗ್ರಾಮದ ಜಲ್ಲಪ್ಪನೋರ ತೋಟದಲ್ಲಿ ನಡೆದ ಕರವೇ ಕಾರ್ಯಕರ್ತರ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಅವಧಿಗೆ ಮುನ್ನವೇ ಅಕಾಲಿಕ ಮಳೆ ಬಂದು ಗ್ರಾಮೀಣ ಭಾಗದಲ್ಲಿ ಮನೆಗಳು ಹಾನಿಗೀಡಾಗಿ, ಬೆಳೆ ನಾಶವಾಗಿ, ರೈತರು ಕಂಗಾಲಾಗಿದ್ದು ಮತ್ತು ಜಾನುವಾರುಗಳು ಸಿಡಿಲಿಗೆ ಬಲಿಯಾಗಿವೆ. ವರುಣದೇವ ಬಡರೈತರ ಪಾಲಿಗೆ ಯಮನಾಗಿ ಬೆಳೆದ ಬೆಳೆ ಕೈಗೆ ಸಿಗದೆ ಪರದಾಡುವಂತ ಸ್ಥಿತಿ ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ತಮ್ಮ ಊರುಗಳಲ್ಲಿ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುವಂತೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಒತ್ತಡ ತರಬೇಕೆಂದು ಹೇಳಿದರು. ಕರವೇ ತಾಲೂಕ ಪ್ರ. ಕಾರ್ಯದರ್ಶಿ ಮಲ್ಲು ವರಕನಳ್ಳಿ ಮಾತನಾಡಿ, ಈಗಾಗಲೇ ಬೇಸಿಗೆ ಶುರುವಾಗಿರುವುದರಿಂದ, ಗ್ರಾಮೀಣ ಪ್ರದೇಶದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಸಂಬಂಧಿತ ಗ್ರಾಮ ಪಂಚಾಯಿತಿ ಅಧಿಕಾರಿಗಳ ಜೊತೆ ನಿರಂತರ ಸಂರ್ಪಕದಲ್ಲಿದ್ದು, ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಮಹಾವೀರ ಲಿಂಗೇರಿ, ರಾಜು ಚವಾಣ, ಚೌಡಯ್ಯ ಬಾವೂರ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement