ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಲೋಕ ಚುನಾವಣೆ ನಿರ್ವಹಣೆ ತಂಡಗಳ ರಚನೆ

Rashmi Kasaragodu
Updated On : 13 Mar 2014, 11:58 am

ಸುರಪುರ:ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಚುನಾವಣಾ ವೆಚ್ಚ ನಿರ್ವಹಣೆಗಾಗಿ ತಾಲೂಕಿನಲ್ಲಿ ವಿಶೇಷ ತಂಡಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಕಾರಿ ಬಸವರಾಜ ಸುಣ್ಣದ ತಿಳಿಸಿದರು.
  ಇಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ನೀತಿಸಂಹಿತೆ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಏ.17ರಂದು ಒಂದೇ ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣಾ ವೆಚ್ಚ ನಿರ್ವಹಣೆಗಾಗಿ ಫ್ಲೈಯಿಂಗ್ ಸ್ಕ್ವಾಡ್, ಸ್ಪಾಟಿಕ್ ಸರ್ವಿಲೆನ್ಸ್ ತಂಡ, ಅಕೌಂಟಿಂಗ್ ತಂಡ ಹಾಗೂ ವಿಡಿಯೊ ಸರ್ವಿಲೆನ್ಸ್ ತಂಡವನ್ನು ನೇಮಕ ಮಾಡಿ, ಚುನಾವಣಾ ಸಮಯದಲ್ಲಿ ಅನಧಿಕೃತ ನಗದು ವಿತರಣೆ, ಆಮಿಷ ಒಡ್ಡುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
  ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚದ ಮಿತಿಯನ್ನು 70 ಲಕ್ಷ ರೂ.ಗಳಿಗೆ ಮಿತಿಗೊಳಿಸಲಾಗಿದೆ. ತಾಲೂಕಿನಲ್ಲಿ 287 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.
ನೀತಿ ಸಂಹಿತೆ ಉಲ್ಲಂಘನೆಯಾಗಬಾರದು: ಸದ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸ್ವತಂತ್ರ ಅಭ್ಯರ್ಥಿಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಂಡು ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸಬೇಕು. ಒಂದು ವೇಳೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆಗಳಲ್ಲಿ ಮತದಾರರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ರ್ಯಾಂಪ್ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ವಿವರಿಸಿದರು.
ಕಂಟ್ರೋಲ್ ರೂಂ: ಲೋಕಸಭಾ ಚುನಾವಣೆ ಸಂಬಂಧ ದೂರುಗಳನ್ನು ಸ್ವೀಕರಿಸಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಇಲ್ಲಿ ಮಿನಿ ವಿಧಾನಸೌಧದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ.
 ಚುನಾವಣೆಯ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08443-256043ಗೆ ಕರೆ ಮಾಡಿ ದೂರು ನೀಡಬಹುದು ಎಂದರು. ತಹಸೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಭಯ್ಯ ಹಿರೇಮಠ, ಜಿಪಂ ಎಇಇ ಬಸಯ್ಯ ಹಿರೇಮಠ, ಶಿರಸ್ತೇದಾರ್ ಅಶೋಕ ಸುರಪುರಕರ್, ಕಂದಾಯ ನಿರೀಕ್ಷಕ ಅಣವೀರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement