17ರಿಂದ ಕಾಂಗ್ರೆಸ್ ತಾಲೀಮು ಶುರು
ಚಿಂಚೋಳಿ: ಲೋಕಸಭೆ ಚುನಾವಣೆಗಳು ಘೋಷಣೆಯಾಗುತ್ತಿದ್ದಂತೆ ತಾಲೂಕಿನಲ್ಲಿ ಕೆಲ ರಾಜಕೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬೀದರ್ ಸಾಮಾನ್ಯ ಲೋಕಸಭೆ ಮತಕ್ಷೇತ್ರಕ್ಕೆ ಒಳಪಟ್ಟಿರುವ ಚಿಂಚೋಳಿ ತಾಲೂಕು ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಮಾ.17ರಂದು ಪಾದಯಾತ್ರೆ ನಡೆಸುವುದರ ಮೂಲಕ ಕಾಂಗ್ರೆಸ್ ತನ್ನ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದೆ. ಶಾಸಕ ಡಾ. ಉಮೇಶ ಜಾಧವ್, ಡಾ. ಅಜಯಸಿಂಗ್, ಮಾಜಿ ಶಾಸಕ ಕೈಲಾಶ ವೀರೇಂದ್ರ ಪಾಟೀಲ್, ಎಂ.ವೀರಯ್ಯ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಭಾಗಣ್ಣ ಸಂಕನೂರ ಇನ್ನಿತರರು ಭಾಗವಹಿಸಲಿದ್ದಾರೆ.
ಬೀದರ್ ಲೋಕಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂಡೆಪ್ಪ ಖಾಶೆಂಪುರ ಈವರೆಗೆ ಪಕ್ಷದ ರಾಜಕೀಯ ಚಟುವಟಿಕೆ ನಡೆಸಿಲ್ಲ. ಮುಂದಿನ ವಾರದಿಂದ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ನಡೆಯಲಿವೆ ಎಂಬ ಮಾತು ಕಾರ್ಯಕರ್ತರಲ್ಲಿ ಕೇಳಿ ಬರುತ್ತಿವೆ.