ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬ್ಯಾಂಕ್‌ಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿ

Rashmi Kasaragodu
Updated On : 15 Mar 2014, 11:38 am

ಕನ್ನಡಪ್ರಭ ವಾರ್ತೆ  ಯಾದಗಿರಿ  ಮಾ.14
ಬ್ಯಾಂಕ್‌ಗಳಲ್ಲಿ ರಾತ್ರಿ ವೇಳೆ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಸಿಬ್ಬಂದಿ ನೇಮಿಸಬೇಕು ಎಂದು ಸಿಪಿಐ ಬಾಲಚಂದ್ರ ಲಕ್ಕಂ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
 ತಮ್ಮ ಕಚೇರಿಯಲ್ಲಿ ಕರೆಯಲಾದ ನಗರ ಪೊಲೀಸ್‌ಠಾಣೆ ವ್ಯಾಪ್ತಿಯ ಬ್ಯಾಂಕ್ ಮ್ಯಾನೇಜರ್‌ಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಹಕರ ಹಿತದೃಷ್ಟಿಯಿಂದ ಎಲ್ಲಾ ಬ್ಯಾಂಕ್‌ಗಳಲ್ಲಿ ಸೂಚನಾ ಫಲಕ, ಪಾಯಿಂಟ್ ಬುಕ್ ಮತ್ತು ತಮ್ಮ ಎಟಿಎಂಗೆ ಗುಣಮಟ್ಟದ ಸಿಸಿ ಕ್ಯಾಮರಾ, ಅಲಾರಂ ವ್ಯವಸ್ಥೆ, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಇದರಿಂದ ಬ್ಯಾಂಕ್ ದರೋಡೆಗಳನ್ನು ನಿಯಂತ್ರಿಸಲು ಅನುಕೂಲವಾಗುತ್ತದೆ. ಕಳ್ಳತನ, ದರೋಡೆ ಪ್ರಕರಣಗಳು ತಡೆಗಟ್ಟಲು ತಮ್ಮೆಲ್ಲರ ಸಹಕಾರ ಬಹು ಅವಶ್ಯವಾಗಿದೆ ಎಂದು ಹೇಳಿದರು.
  ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಗುರುಶಾಂತ ದಾಶ್ಯಾಳ ಮಾತನಾಡಿ, ಬ್ಯಾಂಕಿನ ಒಳಗಡೆ ಯಾವುದೇ ವ್ಯಕ್ತಿಯಾಗಲಿ ಸಂಶಯಾಸ್ಪವಾಗಿ ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು. ನಗರದ ಬ್ಯಾಂಕ್‌ಗಳಲ್ಲಿ ರಾತ್ರಿ ವೇಳೆ ಭದ್ರತೆಯ ದೃಷ್ಟಿಯಿಂದ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಲಹೆ ನೀಡಿದರು.
 ಸಭೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಅಕ್ಸಿಸ್, ಐಸಿಐಸಿಐಐ ಬ್ಯಾಂಕ್ ಮತ್ತು ನಗರದ ಎಲ್ಲಾ ಖಾಸಗಿ ಬ್ಯಾಂಕ್ ಮತ್ತು ಫೈನಾನ್ಸ್ ಸಂಸ್ಥೆಯವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement