ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪ್ರಗತಿ ಹೊಂದಲು ಸ್ತ್ರೀಯರಿಗೆ ಸಲಹೆ

Srinivasa Murthy VN
Updated On : 17 Mar 2014, 10:07 am

ಅಫಜಲ್ಪುರ: ಇಂದಿನ ದಿನಗಳಲ್ಲಿ ಮಹಿಳೆಯರು ಪುರುಷರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲವೆಂದು ಪ್ರತಿ  ರಂಗಗಳಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ಇಂದಿನ ದಿನಗಳಲ್ಲಿ ಸ್ತ್ರೀ ಶಕ್ತಿಯು ಸಂಘ ಪ್ರಾಮಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಪ್ರಶಾಂತ ಕುಮಾರ ಡಿ. ಹೇಳಿದರು.
ಅವರು ತಾಲೂಕಿನ ಮಣ್ಣುರ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾಸಮಿತಿ ಅಫಜಲ್ಪುರ ತಾಲೂಕು ನ್ಯಾಯಾವಾದಿಗಳ ಸಂಘ ಅಫಜಲ್ಪುರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಬಲಾತ್ಕಾರದಂತಹ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದನ್ನು ತಡೆಗಟ್ಟಲು ಮಹಿಳೆಯರು ಶಿಕ್ಷಣ ಪಡೆದುಕೊಳ್ಳಬೇಕು. ಇದರ ಜೊತೆಗೆ ಮಾನಸಿಕವಾಗಿ, ಆರ್ಥಿಕವಾಗಿ ಮಹಿಳೆಯರು ಸಬಲರಾಗಬೇಕು. ಆಗ ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ನ್ಯಾಯವಾದಿಗಳಾದ ಕೆ.ಜಿ. ಪೂಜಾರಿ ಎಸ್.ಎಸ್. ಪಾಟೀಲ ಸಿ.ಎಸ್. ಹಿರೆಮಠ ಮಹಿಳೆಯರ ಆಸ್ತಿ ಹಕ್ಕುಗಳು ಹಾಗೂ ಮಹಿಳೆಯರ ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಮಾತನಾಡಿದರು. ಸಿಡಿಪಿಓ ಸರಳಾ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಓ ರಮೇಶ ಪಾಟೀಲ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀಬಾಯಿ ಕುಲಕರ್ಣಿ ಕಮಲಾ ಬಾಯಿ ಉಪ್ಪಿನ ಸಂಜೀವ ದೈತನ ಸೇರಿದಂತೆ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಶಾರದಾ ಅವಟೆ ಸ್ವಾಗತಿಸಿ, ನಿರೂಪಿಸಿದರು. ಮಲಕಮ್ಮಾ ನಿಂಬಾಳ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement