ಮಹಿಳೆ ಮೇಲೆ ರೇಪ್: ಯುವಕನ ಬಂಧನ
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದ ವಿವಾಹಿತ ಮಹಿಳೆಯೊಬ್ಬಳ ಮೇಲೆ ಅದೇ ಗ್ರಾಮದ ಯುವಕನೊಬ್ಬ ಅತ್ಯಾಚಾರ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಒಂಟಿ ಮಹಿಳೆ ಸ್ನಾನ ಮಾಡುತ್ತಿರುವಾಗ ಅದೇ ಗ್ರಾಮದ ಪಕ್ಕದ ಮನೆಯ ಶಿವರಾಜಕುಮಾರ್ ಶಂಕ್ರಪ್ಪ ಬೇಡರ ಮಹಿಳೆ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮಹಿಳೆ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗ ಆಸ್ಪತ್ರೆಗೆ ಸೇರಿಸಲಾಗಿದೆ. ಮಹಿಳೆ ನೀಡಿದ ದೂರಿನನ್ವಯ ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿವರಾಜಕುಮಾರ್ ಶಂಕ್ರಪ್ಪ ಬೇಡರ ಈತನ ವಿರುದ್ಧ ಕೇಸು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್ಪಿ ಮಹೇಶ ಮೇಘಣ್ಣನವರ ಮಾರ್ಗದರ್ಶನದಲ್ಲಿ ಸಿಪಿಐ ಶಂಕರಗೌಡ ಪಾಟೀಲ್, ಸಿಪಿಐ ಸಂಜುಕುಮಾರ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.