ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದು ಖರ್ಗೆ ನಾಮಪತ್ರ ಸಲ್ಲಿಕೆ

Rashmi Kasaragodu
Updated On : 20 Mar 2014, 12:30 pm

ಗುಲ್ಬರ್ಗ: ಗುಲ್ಬರ್ಗ ಲೋಕಸಭೆ (ಮೀಸಲು) ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಕಾಂಗ್ರೆಸ್ ಹುರಿಯಾಳು, ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಮಾ.20 ರಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ದಿನ ಬೆಳಗ್ಗೆಯೇ ಜಗತ್ ವೃತ್ತದಿಂದ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ ನಡೆಯಲಿದೆ. ಜಗತ್ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಹಾಗೂ ಬಸವಣ್ಣನವರ ಪುತ್ಥಳಿಗಳಿಗೆ ಮಾಲೆ ಅರ್ಪಿಸಿದ ನಂತರ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಚೇರಿಗೆ ಆಗಮಿಸುವ ಖರ್ಗೆ ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬರೋಬ್ಬರಿ 12.30ಕ್ಕೆ ನಡೆಯುವ ಖರ್ಗೆ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಬಾಬೂರಾವ ಚಿಂಚನ್ಸೂರ್, ಖಮರುಲ್ ಇಸ್ಲಾಂ, ಭಾಗಣಗೌಡ ಸಂಕನೂರ್ ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement