ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಕಾಂಗ್ರೆಸ್‌ನ ಕಾರ್ಯಗಳು ಸ್ಮರಣೀಯ'

Rashmi Kasaragodu
Updated On : 21 Mar 2014, 12:39 pm

ಗುಲ್ಬರ್ಗ: ಕಳೆದ 5 ವರ್ಷಗಳಲ್ಲಿ ಗುಲ್ಬರ್ಗ ಮತಕ್ಷೇತ್ರದ ಸಂಸದನಾಗಿ ಕೇಂದ್ರ ಸಚಿವನಾಗಿ ಕ್ಷೇತ್ರಕ್ಕೆ , ಕರ್ನಾಟಕಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ತಮ್ಮ ಕಾರ್ಯಸಾಧನೆಗಳ ಬಗ್ಗೆ ಹೇಳಿದರು.
ಸರ್ಕಾರಿ ಹುದ್ದೆಗೆ ರಾಜಿನಾಮೆ ನೀಡಿ ಶರಣು ಸಲಗರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ವಿ.ಕೆ. ಸಲಗರ ಗ್ರಾಮದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಸಂದರ್ಭದಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಕೇಂದ್ರದಲ್ಲಿ ಅನೇಕ ಜನಪರ ಕೆಲಸ ಮಾಡಿದೆ. ಸ್ವಾಸ್ಥ್ಯ ಬೀಮಾ ಯೋಜನೆ, ಕಾರ್ಮಿಕರಿಗಾಗಿ ದೇಶದಲ್ಲಿ ಅನೇಕ ಕಡೆ ಇಎಸ್‌ಐ ಆಸ್ಪತ್ರೆ, 371(ಜೆ) ಕಲಂ, ಸ್ಕಿಲ್ ಡೆವಲಪ್‌ಮೆಂಟ್ ತರಬೇತಿ ಕೇಂದ್ರ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆಂದರು.
ಪ್ರಭಾವಿತ: ಕಾಂಗ್ರೆಸ್‌ಗೆ ಸೇರ್ಪಡೆಯಾದ ಶರಣು ಸಲಗರ್ ಮಾತನಾಡಿ, ಖರ್ಗೆಯವರ ನಾಯಕತ್ವ, ಜನಪರ ಕಾಳಜಿ ಮತ್ತು ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತನಾಗಿ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೆನೆಂದರು. ಶಾಸಕ ಜಿ. ರಾಮಕೃಷ್ಣ, ಮಲ್ಲಿನಾಥ ಪಾಟೀಲ್ ಸೊಂತ, ಜಿಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಟಗಿ ಮಾತನಾಡಿದರು.
ಈ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅದ್ಯಕ್ಷ ಸೋಮಶೇಖರ ಗೋನಾಯಕ, ಜಿಪಂ ಅಧ್ಯಕ್ಷ ರಮೇಶ ಮರಗೋಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement