ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಮಹಿಳೆ ಆರ್ಥಿಕವಾಗಿ ಪ್ರಗತಿ ಸಾಧಿಸಲಿ: ಚಂದ್ರಕಾಂತ ಜಾದವ

Mainashree
Updated On : 29 Mar 2014, 11:01 am

ಯಾದಗಿರಿ: ಮಹಿಳೆಯರು ಸಬಲತೆ ಹೊಂದಬೇಕಾದರೆ ಆರ್ಥಿಕವಾಗಿ ಪ್ರಬಲಗೊಳ್ಳಬೇಕೆಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ ಎನ್.ಜಾಧವ ಹೇಳಿದರು.
ನಗರದ ಗುರುವಾರ ಸಂಜೆ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಿನಿ, ಕಿರುಸಾಲ ಯೋಜನೆಯ ಮಹಿಳಾ ಉದ್ಯಮಿಗಳ ಹಾಗೂ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಮಹಿಳಾ ಉದ್ದಿಮೆದಾರರುಗಳಿಂದ ತಯಾರಿಸಲ್ಪಟ್ಟ ಆಕರ್ಷಕ ಕರಕುಶಲ ವಸ್ತುಗಳನ್ನು ಜಿಲ್ಲಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಫಾಟಿಸಿ ಮಾತನಾಡಿದರು. ಮಹಿಳೆ ಒಂಟಿ ಎಂದು ಭಾವಿಸಬಾರದು, ಮಹಿಳಾ ನಿಗಮವು ಸಾಲ ನೀಡುತ್ತಿದೆ. ಇದರ ಸದುಪಯೋಗ ಪ್ರತಿಯೊಬ್ಬರು ಪಡೆಯಬೇಕೆಂದು ತಿಳಿಸಿದರು.
ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಮೂರು ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಮನೆಯಲ್ಲಿ ಕರಕುಶಲ ವಸ್ತುಗಳನ್ನು ತಯಾರಿಸಿ ಇಲ್ಲಿ ಮಾರಾಟ ಮಾಡಬೇಕು. ಮಹಿಳೆಯರಿಗೆ ಸಾಲ ನೀಡುವ ಯೋಜನೆ ಹಮ್ಮಿಕೊಂಡಿದೆ ಎಂದರು. ಮುಖ್ಯ ಅತಿಥಿಗಳಾಗಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ವಿಜಯಕುಮಾರ ಬಾಗಲಕೋಟ ಮಾತನಾಡಿದರು.ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಎಸ್. ನಿಷ್ಟಿ ವಹಿಸಿದ್ದರು. ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು ಶಿವಮಂಗಳ ಎಸ್.ಬಿಲುಗಂದೆ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾಧಿಕಾರಿ ಎಸ್.ಎನ್. ಹಿರೇಮಠ ನಿರೂಪಿಸಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement