ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಲು ಪ್ರಯತ್ನ: ಬಿಜೆಪಿ ಆರೋಪ

Rashmi Kasaragodu
Updated On : 2 May 2014, 11:44 am

ಯಾದಗಿರಿ: ಅಕ್ರಮವಾಗಿ ಗೋವು ಸಾಗಿಸುವ ವೇಳೆ ಎಎನ್‌ಎಫ್‌ನ ಪೊಲೀಸರ ಗುಂಡಿಗೆ ಬಲಿಯಾದ ಕಬೀರ್ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಮೊದಲಿನಿಂದಲೂ ಸಮಾಜವನ್ನು ಒಡೆಯುವಂತಹ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ. ಈ ಪ್ರಕರಣದಲ್ಲಿ ಕೂಡ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ. ಅಪರಾಧಿಗಳಿಗೆ ಕುಮ್ಮಕ್ಕು ನೀಡುವಂತಹ ಮತ್ತು ಕರ್ತವ್ಯ ನಿರತ ಪೊಲೀಸರ ಮಾನಸಿಕ ಸ್ಥೈರ್ಯ ಕುಗ್ಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
ಒಬ್ಬೊಬ್ಬ ಸಚಿವರದು ಒಂದೊಂದು ನಾಟಕ: ಕಬೀರ್ ಅಲ್ಪಸಂಖ್ಯಾತರ ಸಮುದಾಯದವನು ಎಂಬ ಕಾರಣಕ್ಕಾಗಿ ಗೃಹ ಸಚಿವ ಕೆ.ಜಿ. ಜಾರ್ಜ್ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಆರೋಗ್ಯ ಸಚಿವ ಯು.ಟಿ.ಖಾದರ್, ಕಬೀರ್ ಮತ್ತು ಸಂಗಡಿಗರ ಪರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಅಪರಾಧಗಳನ್ನು ಮುಚ್ಚಿ ಹಾಕುವ ಹುನ್ನಾರದಲ್ಲಿದ್ದಾರೆ. ಸಚಿವ ರಮಾನಾಥ ರೈ ಅವರು ಕಬೀರ್ ಪ್ರಕರಣಕ್ಕೆ ಸಂಬಂಧವೇ ಇಲ್ಲದ ಸಂಘ ಪರಿವಾರವನ್ನು ಎಳೆದು ತರುವ ಮೂಲಕ ಅಲ್ಪಸಂಖ್ಯಾತರದಲ್ಲಿ ಕೋಮುಭಾವನೆ ಮೂಡಿಸಿ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement