ಕನ್ನಡ ರಕ್ಷಣೆಗಾಗಿ ಕಸಾಪ ಪಟ್ಟ ಶ್ರಮ ಅಪಾರ: ದೇಸಾಯಿ
ಕೆಂಭಾವಿ: ವಲಯ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ವಲಯ ಸಾಹಿತ್ಯ ಪರಿಷತ್ ಅಧ್ಯಕ್ಷ ನಿಂಗನಗೌಡ ದೇಸಾಯಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು, ನುಡಿ, ಭಾಷೆ ರಕ್ಷಣೆಯ ಜವಾಬ್ದಾರಿ ಹೊತ್ತು ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಕನ್ನಡದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ವಲಯ ಸಾಹಿತ್ಯ ಪರಿಷತ್ ವತಿಯಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿಠ್ಠಲ್ ಚವಾಣ ಅವರು ಸಾಹಿತ್ಯ ಪರಿಷತ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶಿಕ್ಷಕ ಮಲ್ಲಯ್ಯ ವಡಗೇರಿ ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಬಸವರಾಜ ಗೌಂಡಿ, ಶರಣಯ್ಯ, ಸುಮಿತ್ರಪ್ಪ ಅಂಗಡಿ, ಗುಡದಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.