ಶಿಕ್ಷಕರ ಕ್ಷೇತ್ರ: ಮತದಾರ ಪಟ್ಟಿ ಸೇರ್ಪಡೆ ಅವಕಾಶ
ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಅಂಗವಾಗಿ, ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಪ ಶಿಕ್ಷಕರು ತಮ್ಮ ಹೆಸರುಗಳನ್ನು ಸೇರ್ಪಡಿಸಲು ನಿಗದಿತ ಪ್ರಮಾಣ ಪತ್ರ-16 (ಹೆಚ್ಚುವರಿ ಮಾಹಿತಿ ಸಹಿತ) ಹಾಗೂ ಅನುಬಂಧ-2ನ್ನು ತಮಗೆ ಸಂಬಂಧಿಸಿದ ತಹಸೀಲ್ದಾರ್ ಕಚೇರಿಗಳಲ್ಲಿ ಅರ್ಜಿಗಳನ್ನು (ರಜಾ ದಿನ ಹೊರತುಪಡಿಸಿ) ಕಚೇರಿ ಸಮಯದಲ್ಲಿ ಸಲ್ಲಿಸಬಹುದಾಗಿದೆ.
01-11-1013ರ ಕ್ಕಿಂತ ಪೂರ್ವದಲ್ಲಿ 6 ವರ್ಷಗಳ ಅವಧಿಯಲ್ಲಿ ಕನಿಷ್ಠ 3ವರ್ಷ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದವರು. ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕೃತ ಪ್ರಮಾಣ ಪತ್ರವನ್ನು ಪಡೆದಿರಬೇಕು. ಆದುದರಿಂದ ನಿರಂತರ ಮತದಾರರ ಪಟ್ಟಿಯ ಪರಿಷ್ಕರಣೆ ಅಂಗವಾಗಿ ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಿಕ್ಷಕರ ಕ್ಷೇತ್ರದ ಎಲ್ಲಾ ಅರ್ಹ ಮತದಾರರು ಈ ಸಮಯಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಹಾಗೂ ಸ್ಥಳಾಂತರಗೊಂಡ, ಮೃತಪಟ್ಟ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಡಿಸಿ ಜಮಾದಾರ್ ತಿಳಿಸಿದ್ದಾರೆ.