ಚನ್ನಣ್ಣ ವಾಲಿಕಾರ್'ಕರ್ನಾಟಕ ಚೂಡಾಮಣಿ'
ಗುಲ್ಬರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿಯು ಹಿರಿಯ ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಡಾ. ಚನ್ನಣ್ಣ ವಾಲಿಕಾರ ಅವರನ್ನು 2014ನೇ ಸಾಲಿನ 'ಕರ್ನಾಟಕ ಚೂಡಾಮಣಿ' ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಸಮಿತಿ ಈಶಾನ್ಯ ವಲಯ ಅಧ್ಯಕ್ಷ ರೆಹಮಾನ್ ಮಸ್ಕಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2014ರ ಜೂನ್ ಮೊದಲ ವಾರದಲ್ಲಿ ರಾಯಚೂರಿನಲ್ಲಿ ನಡೆಯುವ ಸಮಾರಂಭದಲ್ಲಿ 10 ಸಾವಿರ ನಗದು ಪುರಸ್ಕಾರದೊಂದಿಗೆ ಸನ್ಮಾನಿಸಿ, ಪ್ರಶಸ್ತಿ ಪತ್ರ ನೀಡಿ, ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಅವರು ಹೇಳಿದ್ದಾರೆ.