ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕರ್ತವ್ಯದಲ್ಲಿ ಜಾಗರೂಕತೆ ಇರಲಿ

Mainashree
Updated On : 15 May 2014, 10:35 am

ಗುಲ್ಬರ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಹೇಳಿದ್ದಾರೆ. ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಚುನಾವಣಾ ಮತ ಎಣಿಕೆ ಕುರಿತಂತೆ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಂತ್ರ ಬಳಕೆ: ಮತ ಎಣಿಕೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಸಹಾಯಕ ಚುನಾವಣಾಧಿಕಾರಿಗಳು ಬಗೆಹರಿಸುವರು ಎಂದು ತಿಳಿಸಿದರು. ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರತಿ ಸುತ್ತಿನ ಮತ ಎಣಿಕೆಯ ವಿವರಗಳುಳ್ಳ ಅಧಿಕೃತ ಪ್ರತಿಯನ್ನು ಚುನಾವಣಾ ಏಜೆಂಟರಿಗೆ ವಿತರಿಸಲಾಗುವುದು. ಅಲ್ಲದೆ ಇದೇ ಮೊದಲ ಬಾರಿಗೆ ಮತ ಎಣಿಕೆ ಸಂದರ್ಭದಲ್ಲಿ ಕಿಆಉ್ಖ (ಕ್ಠ್ಝಿಟಿಡಿಜ್ಠ-ಈ್ಡಟ ಆ್ಡ್ಢ್ಝಟಛ್ಠಣ ಉ್ಝಡಠಟಛಣ ್ಖಟ್ಝಿಡಿ) ಎಂಬ ಯಂತ್ರವನ್ನು ಬಳಕೆಮಾಡಲಾಗುತ್ತಿದೆ ಎಂದರು.  ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಗುಲ್ಬರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಮತ ಎಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ, ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement