ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕಾಂಗ್ರೆಸ್ ಗೆಲವು: ವಿಜಯೋತ್ಸವ

Lingaraj Badiger
Updated On : 19 May 2014, 11:12 am

ಯಾದಗಿರಿ: ಲೋಕಸಭಾ ಚುನಾವಣೆಯಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಭಾರಿ ಅಂತರದಿಂದ ಆಯ್ಕೆಯಾದ ಹಿನ್ನೆಲೆಯಲ್ಲಿ  ದಲಿತ ಸಂಘರ್ಷ ಸಮಿತಿ ಪದಾಕಾರಿಗಳು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಸಮಿತಿ ಪದಾಧಿಕಾರಿ ಮತ್ತು ಕಾಂಗ್ರೆಸ್ ಯುವ ಮುಖಂಡ ಮಲ್ಲಿನಾಥ ಸುಂಗಲಕರ್ ಮಾತನಾಡಿ, ಖರ್ಗೆ ಅವರು ಸತತ 11ನೇ ಬಾರಿ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಹೈ-ಕ ಪ್ರದೇಶವನ್ನು ಅಭಿವೃದ್ಧಿಗೊಳಿಸುವಲ್ಲಿ ಖರ್ಗೆ ಪಾತ್ರ ಪ್ರಮುಖವಾಗಿದೆ ಎಂದರು.
ಹೈ-ಕ ಭಾಗಕ್ಕೆ 371(ಜೆ) ಕಲಂ ಜಾರಿಗೊಳಿಸುವಲ್ಲಿ ಖರ್ಗೆ ಅವರು ಸಾಕಷ್ಟು ಪ್ರಯತ್ನಪಟ್ಟಿದ್ದಾರೆ. ಅಂತೆಯೇ ಕ್ಷೇತ್ರದ ಮತದಾರರು ಅವರನ್ನು ಬೆಂಬಲಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ ಖರ್ಗೆ ಅವರು ನಾಡಿನ ಮುಖ್ಯಮಂತ್ರಿಯಾದರೆ ಕರ್ನಾಟಕವನ್ನು  ಅಭಿವೃದ್ಧಿಯ ಪಥದತ್ತ ಸಾಗಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಪ್ರಭು ಬೊಮ್ಮನ್, ಚಂದ್ರಶೇಖರ ಕುರಕುಂಬಳ, ರವಿ ಈಟೆ ಸೇರಿದಂತೆ ಇನ್ನಿತರರು ಇದ್ದರು.
--
ಖರ್ಗೆ ಗೆಲವು ಅಭಿವೃದ್ಧಿಗೆ ಪೂರಕ
ಯಾದಗಿರಿ: ಮಲ್ಲಿಕಾರ್ಜುನ ಖರ್ಗೆ ಅವರು ಹೈ-ಕದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಚುನಾವಣೆಯಲ್ಲಿ ಜನಮನ್ನಣೆ ಸಿಕ್ಕಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಚೆನ್ನಾರಡ್ಡಿ ಪಾಟೀಲ ತನ್ನೂರು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದಾಗ ಕ್ಷೇತ್ರಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಖರ್ಗೆ ಅವರು ಕೈಗೊಂಡಿದ್ದಾರೆ. ಸಂವಿಧಾನ 371(ಜೆ) ತಿದ್ದುಪಡಿ, ರೈಲ್ವೆ ವಲಯ, ಇಎಸ್‌ಐ ಆಸ್ಪತ್ರೆ, ಯಾದಗಿರಿಯಲ್ಲಿ ರೈಲ್ವೆ ಬೋಗಿ ಕಾರ್ಖಾನೆಯಂತಹ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಕಾರಣವಾಗಿವೆ ಎಂದಿದ್ದಾರೆ.
ಗುರುಮಠಕಲ್ ಕ್ಷೇತ್ರದಿಂದ ರಾಜಕೀಯ ಜೀವನ ಆರಂಭಿಸಿರುವ ಖರ್ಗೆ, ಸತತ ಎರಡನೇ ಬಾರಿ ಗುಲ್ಬರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವುದು ಯಾದಗಿರಿ ಜಿಲ್ಲೆಯ ಜನರಿಗೆ ಸಂತಸ ಮೂಡಿಸಿದೆ ಎಂದು ಹೇಳಿದ್ದಾರೆ. ಸಂಸದರಾಗಿ ಖರ್ಗೆ ಅವರು ಇನ್ನಷ್ಟು ಅಭಿವೃದ್ಧಿ ಕಾರ್ಯ ಮಾಡಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯವನ್ನು ಬೆಂಬಲಿಸುವ ಮೂಲಕ ಮತದಾರರು, ಅಭಿವೃದ್ಧಿ ಪರವಾದ ನಿಲುವನ್ನು ತೋರಿಸಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement