ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಅರಣ್ಯ ಮತ್ತು ಅರಣ್ಯೇತರ ಭೂಮಿಯನ್ನು ವರ್ಗಿಕರಿಸಲೆಂದು ಸರ್ಕಾರವು ರಚಿಸಿರುವ ರಾಜ್ಯ, ವಿಭಾಗೀಯ ಹಾಗೂ ಜಿಲ್ಲಾ ಮಟ್ಟದ ಸಮಿತಿ ಸಭೆಗಳಿಗೆ ಬಗರ್‌ಹುಕುಂ ಸಾಗುವಳಿಗಾಗಿ ಹೋರಾಟದ ಮುಖಂಡರು ಹಾಗೂ ಪ್ರತಿನಿಧಿಗಳನ್ನು ಸದಸ್ಯರನ್ನಾಗಿಸಿಕೊಳ್ಳಬೇಕು.
ರಾಜ್ಯದ ಸರ್ಕಾರಿ ಜಮೀನಿನಲ್ಲಿ ಹಲವು ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಭೂಮಿಯನ್ನು ಮಂಜೂರು ಮಾಡಿ ಹಕ್ಕು ಪತ್ರ ವಿತರಿಸಬೇಕು.
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರ ಜಮೀನನ್ನು ಸಕ್ರಮಗೊಳಿಸಲು ಎಲ್ಲಾ ತಾಲೂಕುಗಳಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯನ್ನು ರಚಿಸಬೇಕು. ಆ ಸಮಿತಿ ಮೂಲಕ ಹಕ್ಕುಪತ್ರಗಳನ್ನು ವಿತರಿಸಬೇಕು. ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ದೊರಕಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.