ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭ...
ಕನ್ನಡಪ್ರಭ ವಾರ್ತೆ ಹಾಸನ ಏ.1
ಜಿಲ್ಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಕನ್ನಡ ಪ್ರಶ್ನೆ ಪತ್ರಿಕೆ ಪರೀಕ್ಷೆ ನಡೆಯಿತು. ಒಟ್ಟು 27,495 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ನಗರದ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದರು.
ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲು ಹಾಗೂ ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡು, ಅದಕ್ಕೆ ಪೂರಕವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯು.ಪಿ.ಸಿಂಗ್ ಅಧ್ಯಕ್ಷತೆಯಲ್ಲಿ ನಗರದ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿ ಪರೀಕ್ಷೆ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು.
ಹೊಳೆನರಸೀಪುರ ತಾಲೂಕಿನಲ್ಲಿ 11 ಪರೀಕ್ಷಾ ಕೇಂದ್ರ ಹಾಗೂ ಸಕಲೇಶಪುರ ತಾಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಈಸ್ಥಳಗಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.