'ಹೆಣ್ಣು ಭ್ರೂಣ ಹತ್ಯೆ ತಡೆಗೆ ಅರಿವು ಅಗತ್ಯ'
ಹಾಸನ: ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಪರಿವರ್ತನೆ ಅಗತ್ಯವಿದೆ ಎಂದು ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ.ರಂಗಲಕ್ಷ್ಮಿ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪಿಸಿಪಿ ಎನ್ಡಿಟಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಈ ನಿಟ್ಟಿನಲ್ಲಿ ಜನತೆಗೆ ಅರಿವು ಮೂಡಿಸುವ ಸಬಂಧ ಕಾರ್ಯಕ್ರಮ ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದರೂ, ಅವ್ಯಾಹತವಾಗಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ,ಆರ್.ಸಿ.ಹೆಚ್.ಅಧಿಕಾರಿ ಡಾ.ಜನಾರ್ದನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಬ್ಬಿರ್ ಅಹಮದ್, ರಿಹಾನಾ ಮತ್ತಿತರರು ಉಪಸ್ಥಿತರಿದ್ದರು.