ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜೆಡಿಎಸ್ ಏಕಾಂಗಿ ಸ್ಪರ್ಧೆ: ಮಾಜಿ ಪ್ರಧಾನಿ

Rashmi Kasaragodu
Updated On : 3 Apr 2013, 12:51 pm

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪುನರುಚ್ಛರಿಸಿದರು.  ತಾಲೂಕಿನ ಗೊರೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಗೊಂದಲವಿದೆ. ಅಲ್ಲದೇ ಇತರೆ ಏನೇನು ಗೊಂದಲಗಳಿದ್ದಾವೆ ಎಲ್ಲವೂ ಎರಡು-ಮೂರು ದಿನಗಳಲ್ಲಿ (72 ಗಂಟೆಯೊಳಗೆ) ಬಗೆಹರಿಯಲಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.  ರಾಷ್ಟ್ರೀಯ ಪಕ್ಷಗಳು ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ ಎನ್ನುವ ಕಾರಣಕ್ಕೆ ನಮ್ಮ ಪಕ್ಷ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿಲ್ಲ ಅನ್ನೋದು ಸುಳ್ಳು. ಗೊಂದಲಗಳನ್ನು ನಿವಾರಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement