ಜಾವಗಲ್ ಶಾಲೆಯಲ್ಲಿ ಸಮವಸ್ತ್ರ ವಿತರಣೆ
ಕ.ಪ್ರ. ವಾರ್ತೆ ಜಾವಗಲ್ ಏ.3
ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ 2 ನೇ ಅವಧಿಯ ಸಮವಸ್ತ್ರಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕ ಶಿವಲಿಂಗಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಮಾನತೆ, ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಹಾಜರಾತಿ ಹೆಚ್ಚಿಸುವ ಸಲುವಾಗಿ ಸರ್ಕಾರ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಅಕ್ಷರ ದಾಸೋಹ, ಶೈಕ್ಷಣಿಕ ಪರಿಕರಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಮುಂದೆ ಬರಬೇಕೆಂದರು. ಹೆಚ್ಚುವರಿ ಮುಖ್ಯ ಶಿಕ್ಷಕ ಶಿವಣ್ಣ, ಸಂಪನ್ಮೂಲ ವ್ಯಕ್ತಿ ಯೋಗೀಶ್‌ಗೌಡ, ಸುರೇಶ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸಗೌಡ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು. ಶಿಕ್ಷಕ ಹಾಲಪ್ಪ, ರೇಖಾ, ಸರಸ್ವತಿ, ಸರ್ವಮಂಗಳಾ, ನಾಗರತ್ನ ಇದ್ದರು.