ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಟಿಕೆಟ್‌ಗೆ ಆಗ್ರಹಿಸಿ ಬಿಜೆಪಿ ಮುಖಂಡರ ಬಳಿ ನಿಯೋಗ

Rashmi Kasaragodu
Updated On : 3 Apr 2013, 11:43 am

ಕ.ಪ್ರ. ವಾರ್ತೆ೤ ಅರಸೀಕೆರೆ ೤ ಏ.3
ಈ ಬಾರಿ ತಮಗೆ ಬಿಜೆಪಿಯಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಿಯೋಗ ಕರೆದೊಯ್ದು ವರಿಷ್ಠರಲ್ಲಿ ಮನವಿ ಮಾಡುವುದಾಗಿ ತಾಲೂಕು ಪಂಚಾಯ್ತಿ  ಸದಸ್ಯ ಬಿ.ಆರ್. ಜಯಣ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ಐದಾರು ದಶಕಗಳಿಂದ ಹಿಂದುಳಿದ ವರ್ಗದವರನ್ನು ಓಟ್ ಬ್ಯಾಂಕ್ ಆಗಿ ಮಾಡಿಕೆಕ್ಡಿವೆ. ತಾವು 40 ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿ ದುಡಿಯುತ್ತಿದ್ದು ಕಾರ್ಯಕರ್ತರ ನಾಡಿಮಿಡಿತ ಬಲ್ಲವನಾಗಿದ್ದು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ಪ್ರಬಲ ಆಕಾಂಕ್ಷಿಯಾಗಿರುವುದಾಗಿ ಹೇಳಿದ್ದಾರೆ.
ತಾಲೂಕಿನಲ್ಲಿ ವೀರಶೈವ ಜನಾಂಗ ಹೊರತುಪಡಿಸಿದರೆ 2ನೇ ಹಾಗೂ ಹೆಚ್ಚು ಮತದಾರರನ್ನು ಹೊಂದಿರುವ ಕುರುಬ ಸಮಾಜಕ್ಕೆ ಯಾವುದೇ ರಾಜಕೀಯ ಪಕ್ಷಗಳು ಇದುವರೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಲ್ಲ. ಆದ್ದರಿಂದ ಈ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆ ಹೊಂದಿದ್ದೇನೆ.
ಈ ಸಂಬಂಧ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅನಂತಕುಮಾರ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಮನವರಿಕೆ ಮಾಡಿಕೊಡಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement