ಭಾವಗೀತೆ ಸ್ಪರ್ಧೆ
ಚನ್ನರಾಯಪಟ್ಟಣ: ಸಮಾಜದಲ್ಲಿನ ಭ್ರಷ್ಟತೆಯನ್ನು ಹೋಗಲಾಡಿಸಿ ಉತ್ತಮ ಸಮಾಜ ನಿರ್ಮಿಸುವ ಜವಾಬ್ದಾರಿಯುವ ಪೀಳಿಗೆ ಮೇಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮಿಜಿ ತಿಳಿಸಿದರು.
ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದಿ. ನಾಗಮ್ಮ ಶ್ರೀಕಂಠಯ್ಯ ಸ್ಮರಣಾರ್ಥ ಏರ್ಪಡಿಸಿದ್ದ ಚರ್ಚಾಸ್ಪರ್ಧೆ ಹಾಗೂ ಭಾವಗೀತೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಉತ್ತಮ ರಾಷ್ಟ್ರ ಕಟ್ಟುವ ಜವಾಬ್ದಾರಿ ಯುವ ಪೀಳಿಗೆ ಮೇಲಿದ್ದು, ಭ್ರಷ್ಟಾಚಾರ ರಹಿತ ರಾಷ್ಟ್ರ ಕಟ್ಟುವತ್ತಾ ಮುಂದಾಗಬೇಕು ಎಂದು ಹೇಳಿದರು.
ಉತ್ತಮ ಪ್ರಜೆಯಾಗಲು ಮೊದಲು ತಂದೆ ತಾಯಿಯನ್ನು ನಾವು ಗೌರವದಿಂದ ಕಾಣಬೇಕು ಎಂದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಕಾರ್ಯನಿರ್ವಾಹಣಾಧಿಕಾರಿ ರಾಮೇಗೌಡ ಮಾತನಾಡಿದರು.
ಪ್ರಾಂಶುಪಾಲ ಪ್ರೊ. ಸೋಮಸುಂದರ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಜಯರಾಮು, ಚಂದ್ರೇಗೌಡ ಮೊದಲಾದವರು ಉಪಸ್ಥಿತರಿದ್ದರು.