ವಣಗೂರು, ಉಚ್ಚಂಗಿ ಗ್ರಾಪಂ ಅಧ್ಯಕ್ಷರ ಆಯ್ಕೆ
ಸಕಲೇಶಪುರ: ವಣಗೂರು ಹಾಗೂ ಉಚ್ಚಂಗಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಂಗಳವಾರ ನಡೆಯಿತು. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ವಣಗೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರತ್ನಮ್ಮ ಅಧ್ಯಕ್ಷೆಯಾಗಿ ಅವಿರೋಧ ಆಯ್ಕೆಯಾದರೆ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ಅನಿತಾ ಕುಮಾರ್ ಆಯ್ಕೆಯಾಗಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಚ್ಚಂಗಿ ಗ್ರಾಪಂ ಅಧ್ಯಕ್ಷರಾಗಿ ಸಣ್ಣಪ್ಪಗೌಡ ಹಾಗೂ ಪರಿಶಿಷ್ಟಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಕುಶಾಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಬೀಳ್ಕೊಡುಗೆ
ಹಾಸನ: ಸರ್ಕಾರಿ ಕಲಾ ಕಾಲೇಜಿನ ಎನ್ಸಿಸಿ ಘಟಕದಿಂದ ಕಾಲೇಜಿನ ಸಭಾಂಗಣದಲ್ಲಿ ಏ.4 ರಂದು ಬೆಳಗ್ಗೆ 11ಕ್ಕೆ ಡಾ.ಡಿ.ನಾರಾಯಣ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.