ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶರಣ ಸಂಸ್ಕೃತಿ ಯಾತ್ರೆಗೆ ಅದ್ಧೂರಿ ಸ್ವಾಗತ

Rashmi Kasaragodu
Updated On : 3 Apr 2013, 11:35 am

ಸಕಲೇಶಪುರ: ಬಸವಜಯಂತಿ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಶರಣ ಸಂಸ್ಕೃತಿ ಮಹಾಯಾತ್ರೆ ಇತ್ತೀಚೆಗೆ ಪಟ್ಟಣಕ್ಕೆ ಆಗಮಿಸಿದಾಗ ಅದ್ಧೂರಿ ಸ್ವಾಗತ ನೀಡಲಾಯಿತು. ಬಸವಜಯಂತಿ ಆಚರಣೆಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸಲಿರುವ ಈ ಯಾತ್ರೆಯನ್ನು ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನ ಸಮೀಪ ಮಲೆನಾಡು ವೀರಶೈವ ಸಮಾಜದ ಮುಖಂಡರು ಸ್ವಾಗತಿಸಿ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪಕ್ಕೆ ಕರೆತರಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಯಾತ್ರೆಯ ನೇತೃತ್ವ ವಹಿಸಿರುವ ಅರವಿಂದ್ ಜತ್ತಿ, ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪ್ರಚಾರ ಪಡಿಸುವುದು ಈ ಯಾತ್ರೆಯ ಮುಖ್ಯ ಉದ್ದೇಶವಾಗಿದ್ದು ಆಧುನೀಕ ಸಮಾಜದಲ್ಲಿ ಬಸವಣ್ಣನವರ ವಿಚಾರ ಧಾರೆಗಳು ಅತ್ಯವಶ್ಯಕ ಎಂದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement