ನಾಳೆ ಸಮುದಾಯದತ್ತ ಶಾಲಾ ಕಾರ್ಯಕ್ರಮ
ಹೊಳೆನರಸೀಪುರ: 2012-13 ನೇ ಸಾಲಿನ ಶೈಕ್ಷಣಿಕ ವರ್ಷದ ಸಮುದಾಯದತ್ತ ಶಾಲಾ ಕಾರ್ಯಕ್ರಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಏಪ್ರಿಲ್ 6 ರಂದು ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಏಪ್ರಿಲ್ 14 ರಂದು ಸರಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ಆಯಾ ಶಾಲೆಯ ಶಿಕ್ಷಕರು ಕಡ್ಡಾಯವಾಗಿ ನಡೆಸಬೇಕೆಂದು ಬಿಇಓ ಯೋಗೇಶ್ ತಿಳಿಸಿದ್ದಾರೆ.