ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಿಎಸ್ಪಿ ಜಿಲ್ಲಾಧ್ಯಕ್ಷ ಅಹಮ್ಮದ್ ಉಚ್ಚಾಟನೆ

Rashmi Kasaragodu
Updated On : 5 Apr 2013, 12:04 pm

ಕನ್ನಡಪ್ರಭ ವಾರ್ತೆ೤ ಹಾಸನ೤ ಏ.4
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಎ.ಪಿ. ಅಹಮ್ಮದ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ.
ಅಹಮ್ಮದ್ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು ಚುನಾವಣಾ ಸಂದರ್ಭದಲ್ಲಿ ಇತರೆ ಪಕ್ಷಗಳ ಜತೆ ಸಂಬಂಧ ಇಟ್ಟುಕೊಂಡು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವ ಸಂಗತಿ ಹಾಗೂ ಪಕ್ಷಗಳಿಂದ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿರುವುದು ಸಹ ರಾಜ್ಯ ಸಮಿತಿ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಜಿಲ್ಲೆಯ ಯಾವ ಪದಾಧಿಕಾರಿಗಳು  ಅವರೊಡನೆ ಯಾವುದೇ ಸಂಬಂಧ ಇಟ್ಟುಕೊಳ್ಳಬಾರದು ಎಂದು ಮುನಿಯಪ್ಪ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement